ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಸ್ವ – ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ ನ. 14ರಂದು ಧರ್ಮಸ್ಥಳ ಅಮೃತ ವರ್ಷಿಣಿ ಸಭಾಂಗಣದಲ್ಲಿ ಜರಗಿತು.
ಭಾರತ ಸರಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ನಬಾರ್ಡ್ ಅಧ್ಯಕ್ಷ ಶಾಜಿ ಕೆ. ವಿ., ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಡಾ. ಹೇಮಾವತಿ ವಿ. ಹೆಗ್ಗಡೆ, ಮಂಗಳೂರು ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಭಾಗವಹಿಸಿದ್ದರು.
ಅರ್ಹ ಸ್ವಸಹಾಯ ಸಂಘಗಳಿಗೆ ರೂ. 605 ಕೋಟಿ ಲಾಭಾಂಶ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿವಿಧ ಬ್ಯಾಂಕ್ ಅಧಿಕಾರಿಗಳು, ಗ್ರಾಮಾಭಿವೃದ್ಧಿ ಯೋಜನೆಯ ಅಧಿಕಾರಿಗಳು, ಸಿಬ್ಬಂದಿಗಳು, ಸ್ವಸಹಾಯ ಸಂಘಗಳ ಸದಸ್ಯರು ಹಾಜರಿದ್ದರು.
ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್. ಎಸ್. ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಶಾಂತಾರಾಮ್ ಆರ್. ಪೈ, ಪ್ರವೀಣ್, ಪ್ರಾದೇಶಿಕ ನಿರ್ದೇಶಕ ಆನಂದ ಸುವರ್ಣ ನಿರೂಪಿಸಿದರು.