ಧರ್ಮಸ್ಥಳ: ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಇಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಧರ್ಮಸ್ಥಳ ಇದರ ವತಿಯಿಂದ ನಡೆದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಯಲ್ಲಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ವಿದ್ಯಾರ್ಥಿಗಳು ಭಾಗವಹಿಸಿ ಬಹುಮಾನ ಪಡೆದಿರುತ್ತಾರೆ.
ಪ್ರೌಢಶಾಲಾ ವಿಭಾಗದಲ್ಲಿ ಎಂಟನೇ ತರಗತಿಯ ವರ್ಚಸ್ ಶ್ಲೋಕ ಕಂಠ ಪಾಠ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. 9ನೇ ತರಗತಿಯ ಮಹಿಮಾ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಮಾಧುರ್ಯ ಪ್ರಬಂಧ ರಚನೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಭಾಷಣ ಸ್ಪರ್ಧೆಯಲ್ಲಿ ಆರನೇ ತರಗತಿಯ ಆರಾಧ್ಯ ಪಿ ಜೋಶಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ ಹಾಗೂ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ 5ನೇ ತರಗತಿಯ ವೈದೇಹಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ.
p>