ಧರ್ಮಸ್ಥಳ: ಕರ್ನಾಟಕ ಸರಕಾರ, ರಾಜ್ಯ ಸಹ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಇದರ ಸಹಯೋಗದಲ್ಲಿ ನ. 15ರಂದು ಮಂಗಳೂರಿನ ಸರಕಾರಿ ಬಿ ಎಡ್ ಕಾಲೇಜಿನಲ್ಲಿ ಪ್ರೌಢ ಶಾಲಾ ಸಹ ಶಿಕ್ಷಕರಿಗಾಗಿ ನಡೆದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ಕನ್ನಡ ಶಿಕ್ಷಕ ಯುವರಾಜ್ ಇವರು ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿ ಪಾಲ್ಗೊಂಡು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.