ಉಜಿರೆ: ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

0

ಉಜಿರೆ: ಅಂಗನವಾಡಿ ಕೇಂದ್ರದ ಮಕ್ಕಳ ದಿನಾಚರಣೆ ಉಜಿರೆ ಗ್ರಾಮ ಪಂಚಾಯತ್ ಸುವರ್ಣ ಸೌಧದಲ್ಲಿ ನ. 14ರಂದು ಆಚರಿಸಲಾಯಿತು. ಅಧ್ಯಕ್ಷತೆಯನ್ನು ಪುಟಾಣಿ ಭೂಮಿಕಾ ವಹಿಸಿದ್ದರು. ಉದ್ಘಾಟನೆಯನ್ನು ಪುಟಾಣಿ ಶ್ರೇಯಂಶ್ ರಾಘವ ಪಡುವೆಟನ್ನಾಯ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಮಹಿಳಾ ಒಕ್ಕೂಟದ ಅಧ್ಯಕ್ಷೆ ಸವಿತಾ ಜಯದೇವ್, ಉಜಿರೆ ಮಹಿಳಾ ಮಂಡಲದ ಅಧ್ಯಕ್ಷೆ ಜಯಶ್ರೀ ಪ್ರಕಾಶ್ ಅಪ್ರಮೇಯ, ಆನ್ಸ್ ಕ್ಲಬ್ ಅಧ್ಯಕ್ಷೆ ಗಾಯತ್ರಿ ಶ್ರೀಧರ್, ಬಾಲವಿಕಾಸ ಸಮಿತಿ ಅಧ್ಯಕ್ಷೆ ಗೀತಾ, ಆಶಾ ಕಾರ್ಯಕರ್ತೆ ಸುಮಂಗಲ, ಗೊಂಚಲು ಸ್ತ್ರೀ ಶಕ್ತಿ ಅಧ್ಯಕ್ಷೆ ಸುಮಿತ್ರ, ಬಾಲ ವಿಕಾಸ ಸಮಿತಿ ಸದಸ್ಯರು, ಹೆತ್ತವರು ಉಪಸ್ಥಿತರಿದ್ದರು. ಮೆಸ್ಕಾಂ ಇಲಾಖೆಯ ಜೆ. ಇ. ಶ್ವೇತಾ ಉಪಹಾರದ ವ್ಯವಸ್ಥೆಗೆ ಸಹಕರಿಸಿದರು. ಪಂಚಾಯತ್ ಸಿಬ್ಬಂದಿ, ಅಂಗನವಾಡಿ ಸಹಾಯಕಿ ಸಹಕರಿಸಿದರು. ಅಂಗನವಾಡಿ ಕಾರ್ಯಕರ್ತೆ ಮೀನಾಕ್ಷಿ ಸ್ವಾಗತಿಸಿ, ವಂದಿಸಿದರು.

p>

LEAVE A REPLY

Please enter your comment!
Please enter your name here