ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ.15ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮವು ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭವಾಯಿತು. ಸಹ ಶಿಕ್ಷಕಿ ಎಲಿಜಾ ಶಾಂತಿ ಮಕ್ಕಳ ದಿನಾಚರಣೆಯ ಮಹತ್ವವನ್ನು ವಿವರಿಸಿದರು.
ಶಿಕ್ಷಕ-ಶಿಕ್ಷಕೇತರ ವೃಂದದವರು ಹಾಡು, ನೃತ್ಯ, ನಾಟಕದ ಮೂಲಕ ಮಕ್ಕಳನ್ನು ಮನರಂಜಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಶಾಲಾ ಸಂಚಾಲಕ ವಂ|ಸ್ವಾ| ಸ್ಟ್ಯಾನಿ ಗೋವಿಯಸ್ ವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ವಂ|ಸ್ವಾ| ದೀಪಕ್ ಲಿಯೊ ಡೇಸರವರು ಹಾಗೂ ಶಿಕ್ಷಕ-ರಕ್ಷಕ ಸಂಘದ ಸದಸ್ಯರಾದ ವಸಂತ ಮತ್ತು ಡಯಾನ ಮಿಸ್ಕಿತ್ ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಶಿಕ್ಷಕಿಯರಾದ ವಿನ್ನಿ ಲೋಬೋ ನಿರೂಪಿಸಿ, ಜೋಯ್ಲಿನ್ ಲಿಡ್ವಿನ್ ಸೆರಾವೋರವರು ಸ್ವಾಗತಿಸಿ, ಪ್ರಿನ್ಸಿಯ ಫೆರ್ನಾಂಡೀಸ್ ಧನ್ಯವಾದವನ್ನು ಸಮರ್ಪಿಸಿದರು.