ಧರ್ಮಸ್ಥಳ: ಕರ್ನಾಟಕ ಸರಕಾರ, ರಾಜ್ಯ ಸಹ ಶಿಕ್ಷಕರ ಕಲ್ಯಾಣ ನಿಧಿ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಮಂಗಳೂರು ಇದರ ಸಹಯೋಗದಲ್ಲಿ ನ. 15ರಂದು ಮಂಗಳೂರಿನ ಸರಕಾರಿ ಬಿ ಎಡ್ ಕಾಲೇಜಿನಲ್ಲಿ ಪ್ರೌಢ ಶಾಲಾ ಸಹ ಶಿಕ್ಷಕರಿಗಾಗಿ ನಡೆದ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಯಲ್ಲಿ ತಾಲೂಕಿನ ನಾಲ್ಕು ಮಂದಿ ಶಿಕ್ಷಕರು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರಬಂಧ ಸ್ಪರ್ಧೆಯಲ್ಲಿ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ಕನ್ನಡ ಶಿಕ್ಷಕ ಯುವರಾಜ್, ಸಾಮಾನ್ಯ ರಸ ಪ್ರಶ್ನೆ ಸ್ಪರ್ಧೆಯಲ್ಲಿ ಶಾಲೆತಡ್ಕ ಸರಕಾರಿ ಪ್ರೌಢ ಶಾಲಾ ಶಿಕ್ಷಕ ಶ್ರೀನಿವಾಸ ಶೆಟ್ಟಿಗಾರ್, ಚಿತ್ರಕಲಾ ಸ್ಪರ್ಧೆಯಲ್ಲಿ ಗೇರುಕಟ್ಟೆ ಸರಕಾರಿ ಪ್ರೌಢ ಶಾಲಾ ಶಿಕ್ಷಕ ಕೆಂಚವೀರಪ್ಪ, ವಿಜ್ಞಾನ ರಸ ಪ್ರಶ್ನೆ ಸ್ಪರ್ಧೆಯಲ್ಲಿ ಬದನಾಜೆ ಸರಕಾರಿ ಪ್ರೌಢ ಶಾಲಾ ಶಿಕ್ಷಕ ರಾಮಕೃಷ್ಣ ಎಸ್. ಕೆ. ಇವರು ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.