ಬೆಳ್ತಂಗಡಿ: ಕುಂದಾಪುರ ತಾಲೂಕಿನ ಜನ್ನಾಡಿ ಹಾಗೂ ಮಣಿಗೇರಿ ಕಾಲೋನಿಯಲ್ಲಿ ಕೊರಗ ಸಮುದಾಯದವರಿಗೆ ನಿರ್ಮಿಸಿದ 14 ಮನೆಗಳನ್ನು ಆಹಾರ ಮತ್ತು ನಾಗರಿಕ ಪೂರೈಕೆಗಳ ಸಚಿವ ಕೆ.ಎಚ್. ಮುನಿಯಪ್ಪ ನ.17ರಂದು ಹಸ್ತಾಂತರಿಸಿದ್ದಾರೆ.
ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಉದ್ಯಮಿ ಎಚ್‌ಎಸ್ ಶೆಟ್ಟಿ ತಮ್ಮ ಹೆಗ್ಗುಂಜೆ ರಾಜೀವ್ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಮೂಲಕ 2 ಕೋಟಿ ರೂ. ವೆಚ್ಚದಲ್ಲಿ ಈ ಮನೆಗಳನ್ನು ನಿರ್ಮಿಸಿಕೊಟ್ಟಿದ್ದಾರೆ.
p>