ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ತೆಲಂಗಾಣ ಸಚಿವ ಭೇಟಿ

0

ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ತೆಲಂಗಾಣ ಸರಕಾರದ ಸಾರಿಗೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪೊನ್ನಂ ಪ್ರಭಾಕರ್ ಗುರುವಾರ ಭೇಟಿ ನೀಡಿದರು.

ಸಂಘದ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ, ಸಹಕಾರ ಸಂಘವೊಂದು ನಗರದಲ್ಲಿ ಸುಂದರವಾದ ಸುಸಜ್ಜಿತ ಸೌಲಭ್ಯಗಳ ಕಟ್ಟಡವನ್ನು ಹೊಂದಿರುವುದಕ್ಕೆ ಹಾಗೂ ಸಂಘದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಘದ ವತಿಯಿಂದ ಉಪಾಧ್ಯಕ್ಷರಾದ ಭಗೀರಥ ಜಿ. ಹಾಗೂ ನಿರ್ದೇಶಕರಾದ ಸುಜಿತಾ ವಿ ಬಂಗೇರ, ರಕ್ಷಿತ್ ಶಿವರಾಂ, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ ಕುಮಾರ್ ಪೊನ್ನಂ ಪ್ರಭಾಕ‌ರ್ ಅವರನ್ನು ಗೌರವಿಸಿದರು.

ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಶೇಖರ ಕುಕ್ಕೇಡಿ, ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್, ಕೇಂದ್ರ ಕಚೇರಿಯ ವ್ಯವಸ್ಥಾಪಕ ಕೀರ್ತನ್ ಕುಮಾರ್, ಮಾರಾಟ ಅಧಿಕಾರಿ ಶಿವಪ್ರಕಾಶ್, ಮಾನವ ಸಂಪನ್ಮೂಲ ಅಧಿಕಾರಿ ರೂಪಲತಾ ಕಕ್ಕಿಂಜೆ ಶಾಖಾ ಕಚೇರಿ ವ್ಯವಸ್ಥಾಪಕ ಜಾರಪ್ಪ ಪೂಜಾರಿ, ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

p>

LEAVE A REPLY

Please enter your comment!
Please enter your name here