ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಉಜಿರೆ ವಲಯ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಉಜಿರೆ, ಶ್ರೀ ಜನಾರ್ದನ ದೇವಸ್ಥಾನ ಉಜಿರೆ ಪ್ರಗತಿ ಬಂಧು ಒಕ್ಕೂಟಗಳು ಉಜಿರೆ ವಲಯದ ಸಂಯುಕ್ತ ಆಶ್ರಯದಲ್ಲಿ 40ನೇ ವರ್ಷದ ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ ಉಜಿರೆ ರಾಮಕೃಷ್ಣ ಸಭಾ ಮಂಟಪದಲ್ಲಿ ಜರಗಿತು.
ಬಳಿಕ ಶ್ರೀ ಧ. ಮ. ಕಾಲೇಜು ಇಂದ್ರಪ್ರಸ್ಥ ಆಡಿಟೋರಿಯಂನಲ್ಲಿ ಉಜಿರೆ ಮತ್ತು ಧರ್ಮಸ್ಥಳ ವಲಯ ಒಕ್ಕೂಟದ ಪದಗ್ರಹಣ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಿದ್ದರು. ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೆಸರ ಶರತ್ ಕೃಷ್ಣ ಪಡುವೆಟನ್ನಾಯ ದೀಪ ಬೆಳಗಿಸಿ ಉದ್ಘಾಟಿಸಿದರು.
ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಜನಮಂಗಳ ಕಾರ್ಯಕ್ರಮದ ಸಲಕರಣೆ ವಿತರಣೆ ಮಾಡಿ ಶುಭ ಹಾರೈಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅನಿಲ್ ಕುಮಾರ್ ಎಸ್. ಎಸ್. ಸಾಧಕರನ್ನು ಸನ್ಮಾನಿಸಿದರು. ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಪ್ರಶಾಂತ್ ಜೈನ್, ಬೆಳ್ತಂಗಡಿ ತಾಲೂಕು ಕೇಂದ್ರ ಒಕ್ಕೂಟದ ಅಧ್ಯಕ್ಷ ಸೀತಾರಾಮ್ ಆರ್. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಒಕ್ಕೂಟಗಳ ಪದಗ್ರಹಣ ನಡೆಯಿತು.
ಉಜಿರೆ ಮತ್ತು ಧರ್ಮಸ್ಥಳ ವಲಯದ 19 ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಪದಾಧಿಕಾರಿಗಳು, ನಿಕಟ ಪೂರ್ವ ಪದಾಧಿಕಾರಿಗಳು, ಯೋಜನೆಯ ಪ್ರಾದೇಶಿಕ ನಿರ್ದೇಶಕರು, ಯೋಜನಾಧಿಕಾರಿಗಳು, ಮೇಲ್ವಿಚಾರಕರು, ಸೇವಾಪ್ರತಿನಿಧಿಗಳು, ಸತ್ಯ ನಾರಾಯಣ ಪೂಜಾ ಸಮಿತಿಯ ಪದಾಧಿಕಾರಿಗಳು, ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು, ಶ್ರೀ ಧ. ಮ. ಕಾಲೇಜು ಉಪನ್ಯಾಸಕರು, ಸಿರಿ ಸಂಸ್ಥೆ, ನ್ನಿತರ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಯೋಜನಾಧಿಕಾರಿ ಸುರೇಂದ್ರ ಸ್ವಾಗತಿಸಿದರು. ವಲಯ ಮೇಲ್ವಿಚಾರಕಿ ವನಿತಾ ವರದಿ ವಾಚಿಸಿದರು. ಕೃಷಿ ನಿರ್ದೇಶಕ ರಾಮ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.