Site icon Suddi Belthangady

ಬೆಳ್ತಂಗಡಿ: ಡಿ.1-3 ಉಪಲೋಕಾಯುಕ್ತ ನ್ಯಾ. ಬಿ. ವೀರಪ್ಪರಿಂದ ಜಿಲ್ಲಾ ಶಿಬಿರ – ಭ್ರಷ್ಟಾಚಾರದಲ್ಲಿ ತೊಡಗಿದವರ ವಿರುದ್ಧ ಅಹವಾಲು ಸಲ್ಲಿಸಲು ಅವಕಾಶ

ಬೆಳ್ತಂಗಡಿ: ಉಪಲೋಕಾಯುಕ್ತರಾದ ನ್ಯಾಯಮೂರ್ತಿ ಬಿ.ವೀರಪ್ಪ ಡಿಸೆಂಬರ್ ೧ರಿಂದ ೩ರವರೆಗೆ ದಕ್ಷಿಣ ಕನ್ನಡ ಜಿಲ್ಲಾ ಶಿಬಿರ ಕೈಗೊಳ್ಳಲಿದ್ದಾರೆ.
ಡಿ.2ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ1:30ರವರೆಗೆ ಮತ್ತು ಮಧ್ಯಾಹ್ನ 2:30ರಿಂದ 5ರವರೆಗೆ ಮಂಗಳೂರು ನೇತ್ರಾವತಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ಮತ್ತು ವಿಚಾರಣೆ ಹಮ್ಮಿಕೊಂಡಿದ್ದು ಜಿಲ್ಲೆಯಲ್ಲಿ ಸರ್ಕಾರಿ ಅಧಿಕಾರಿ/ನೌಕರರಿಂದ ಕಾನೂನು ರೀತ್ಯಾ ಆಗಬೇಕಾದ ಕೆಲಸದಲ್ಲಿ ವಿಳಂಬವೇನಾದರೂ ಆಗಿದ್ದರೆ ಅಥವಾ ಅಧಿಕಾರಿ/ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ಯಾವುದೇ ತರಹದ ಭ್ರಷ್ಟಾಚಾರ ಮತ್ತು ದುರಾಡಳಿತದಲ್ಲಿ ತೊಡಗಿದ್ದರೆ ಅದರಿಂದ ತೊಂದರೆಗೊಳಗಾದ ಸಾರ್ವಜನಿಕರು ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಬಹುದಾಗಿದೆ.


ಡಿ.03ರಂದು ಬೆಳಿಗ್ಗೆ 11 ಗಂಟೆಯಿಂದ 1:30ರವರೆಗೆ ಮತ್ತು ಮಧ್ಯಾಹ್ನ 2:30ರಿಂದ 4:30ರವರೆಗೆ ಮಂಗಳೂರುನ ನೇತ್ರಾವತಿ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಪಟ್ಟಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ಉಪಲೋಕಾಯುಕ್ತರ ಕಾರ್ಯವ್ಯಾಪ್ತಿಗೆ ಒಳಪಡುವ ಪ್ರಕರಣಗಳ ತನಿಖೆ/ವಿಚಾರಣೆಗೆ ಬಾಕಿಯಿರುವ ಪ್ರಕರಣಗಳಿಗೆ ಸಂಬಂಧಿಸಿ ಕಛೇರಿಯಿಂದ ನೋಟಿಸ್ ಕಳುಹಿಸಲಾಗಿರುವ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರೀತ್ಯಾ ವಿಚಾರಣೆ ನಡೆಯಲಿದೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರ ಪ್ರಕಟಣೆ ತಿಳಿಸಿದೆ.

Exit mobile version