ಬೆಳ್ತಂಗಡಿ: ಬೆಳ್ತಂಗಡಿ ವಕೀಲರ ಸಂಘ ಹಾಗೂ ಯುವ ವಕೀಲರ ವೇದಿಕೆ ಇದರ ನೇತೃತ್ವದಲ್ಲಿ 75ನೇ ಸಂವಿಧಾನ ದಿನಾಚರಣೆ ನ.26ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ ಆಚರಿಸಲಾಯಿತು. ಈ ಕಾರ್ಯಕ್ರಮವನ್ನು ಬೆಳ್ತಂಗಡಿಯ ಹಿರಿಯ ಶ್ರೇಣಿ ನ್ಯಾಯಾಧೀಶ ಮನು ಬಿ.ಕೆ ಭಾರತ ಸಂವಿಧಾನದ ಪುಸ್ತಕ ಹಾಗೂ ಡಾ ಬಿ ಆರ್ ಅಂಬೇಡ್ಕರ್ ರವರಿಗೆ ಪುಷ್ಪಾರ್ಚನೆಯನ್ನು ಮಾಡುವ ಮೂಲಕ ಉದ್ಘಾಟಿಸಿ ಸಂವಿಧಾನದ ಪೀಠಿಕೆಯನ್ನು ನೆರೆದಿದ್ದ ಎಲ್ಲಾ ವಕೀಲರಿಗೆ ಬೋಧಿಸಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ ಸಂವಿಧಾನದ ಮಹತ್ವ ಹಾಗೂ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಬೆಳಕು ಚೆಲ್ಲಿದರು. ವೇದಿಕೆಯಲ್ಲಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ವಿಜಯೇಂದ್ರ ಟಿ ಹೆಚ್, ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ ಹಾಗೂ ಯುವ ವಕೀಲರ ವೇದಿಕೆಯ ಅಧ್ಯಕ್ಷ ಸಂದೀಪ್ ಡಿಸೋಜ ಉಪಸ್ಥಿತರಿದ್ದರು.
ಬೆಳ್ತಂಗಡಿ ವಕೀಲರ ಹಿರಿಯ ಸಮಿತಿ ಅಧ್ಯಕ್ಷ ಅಲೋಸಿಸ್ ಎಸ್ ಲೋಬೋ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಸಂವಿಧಾನದ ತಿದ್ದುಪಡಿಗಳ ಬಗ್ಗೆ ಮತ್ತು ಸಂವಿಧಾನದ ವಾಸ್ತವಿಕತೆಯ ಬಗ್ಗೆ ವಿವರಿಸಿದರು.
ಈ ಕಾರ್ಯಕ್ರಮದಲ್ಲಿ ಯುವ ವಕೀಲರಿಗೆ ಆಯೋಜಿಸಲಾಗಿದ್ದ ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿಜೇತರಾದ ಸ್ಪರ್ಧಾಳುಗಳಿಗೆ ಬಹುಮಾನವನ್ನು ವಿತರಿಸಲಾಯಿತು. ರಸಪ್ರಶ್ನೆಯ ವಿಜೇತರ ಪಟ್ಟಿಯನ್ನು ಯುವ ವೇದಿಕೆ ಕಾರ್ಯದರ್ಶಿ ಜೋಶ್ನಾ ವೆಲೋನ ಕೊರೆಯ ವಾಚಿಸಿದರು. ಈ ಕಾರ್ಯಕ್ರಮದಲ್ಲಿ ಯುವ ವಕೀಲರಾದ ಜೋಬಿ ಜೋಯ್ ಎಲ್ಲರನ್ನು ಸ್ವಾಗತಿಸಿ, ಶ್ವೇತಾ ಧನ್ಯವಾದ ಸಮರ್ಪಿಸಿದರು.
ಕಾರ್ಯಕ್ರಮದ ನಿರೂಪಣೆಯನ್ನು ಹರ್ಷಿತ್ ಹೆಚ್ ನೆರವೇರಿಸಿದರು.