Site icon Suddi Belthangady

ನಾರಾವಿ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ನಾರಾವಿ: ಗ್ರಾಮ ಪಂಚಾಯತ್, ಹಾಲು ಉತ್ಪಾದಕರ ಸಂಘ ಹಾಗೂ ಬೆನಕ ಹೆಲ್ತ್ ಸೆಂಟರ್ ಉಜಿರೆ ಸಭಾಗಿತ್ವದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಡಾ. ಗೋಪಾಲ್ ಕೃಷ್ಣ. ಕೆ ಆಡಳಿತ ನಿರ್ದೇಶಕರು ಬೆನಕ ಹೆಲ್ತ್ ಸೆಂಟರ್ ನೆರವೇರಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್ ಅಧ್ಯಕ್ಷತೆಯನ್ನು ವಹಿಸಿದ್ದರು. ವೇದಿಕೆಯಲ್ಲಿ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷ ರವೀಂದ್ರ ಪೂಜಾರಿ, ಸದಸ್ಯ ಉದಯಕುಮಾರ್ ಹೆಗ್ಡೆ, ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ದಯಾನಂದ ಪೂಜಾರಿ, ಶಾಲಾ ಮುಖ್ಯೋಪಾಧ್ಯಾಯ ಪ್ರಭಾಕರ ಪೂಜಾರಿ, ಪಂಚಾಯತ್ ಸದಸ್ಯರು, ಗ್ರಾಮ್ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾದ ಸುಧಾಕರ. ಡಿ ಮತ್ತು ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Exit mobile version