



ಮಡಂತ್ಯಾರ್: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮೋಕ್ಷಿತ್. ಎಸ್. ಬಂಗೇರ ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಯುವ ಸಂಸತ್ ಸ್ಪರ್ಧೆ 2024ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿ ಅತ್ಯುತ್ತಮ ಸಾಧನೆಗೈದು ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ.


ಜನವರಿಯಲ್ಲಿ ನವದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಯುವ ಸಂಸತ್ ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ. ಮಡವು ಸುಲತ ಹಾಗು ಸೀತಾರಾಮ.ಟಿ. ಬಂಗೇರರವರ ಪುತ್ರನಾಗಿರುತ್ತಾರೆ. ವರದಿ: ಹರ್ಷ ಬಳ್ಳಮಂಜ









