ಕಕ್ಯಪದವು: ನ. 26 ರಂದು ಎಲ್. ಸಿ. ಆರ್ ಇಂಡಿಯನ್ ಪದವಿ ಪೂರ್ವ ಕಾಲೇಜಿನಲ್ಲಿ “ಸಂವಿಧಾನ ದಿನ” ದ ಅಂಗವಾಗಿ ವಿದ್ಯಾರ್ಥಿಗಳಲ್ಲಿ ಸಾಂವಿಧಾನಿಕ ಮೌಲ್ಯಗಳನ್ನು ಬಿತ್ತರಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರತಿಜ್ಞೆಯನ್ನು ಸ್ವೀಕರಿಸಿದರು.
ಸಂಸ್ಥೆಯ ಪ್ರಾಂಶುಪಾಲ ಜೋಸ್ಟನ್ ಲೋಬೋ, ಸಂಯೋಜಕ ಯಶವಂತ್. ಜಿ. ನಾಯಕ್, ಪದವಿ ಪೂರ್ವ ವಿಭಾಗದ ಮುಖ್ಯಸ್ಥೆ ಸೌಮ್ಯ ಹಾಗೂ ಉಪನ್ಯಾಸಕರು ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾನಾಧಿಕಾರಿ ವಿಂದ್ಯಾಶ್ರೀ ಪ್ರತಿಜ್ಞಾ ವಿಧಿಯನ್ನು ನಡೆಸಿಕೊಟ್ಟರು.