

ಧರ್ಮಸ್ಥಳ: ಪುಂಜಾಲಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್’ನಲ್ಲಿ ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ವತಿಯಿಂದ ನಡೆದ ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಬಹುಮಾನ ಗಳಿಸಿದ್ದಾರೆ.
ಪ್ರೌಢಶಾಲಾ ವಿಭಾಗದಲ್ಲಿ 8ನೇ ತರಗತಿಯ ವರ್ಚಸ್ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 9ನೇ ತರಗತಿಯ ಮಹಿಮಾ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಪ್ರಾಥಮಿಕ ಶಾಲಾ ವಿಭಾಗದಲ್ಲಿ ಭಾಷಣ ಸ್ಪರ್ಧೆಯಲ್ಲಿ 6ನೇ ತರಗತಿಯ ಆರಾಧ್ಯ. ಪಿ. ಜೋಶಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.