ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನ. 26 ರಂದು ರಾಷ್ಟ್ರೀಯ ಸಂವಿಧಾನ ದಿನವನ್ನಾಗಿ ಆಚರಿಸಲಾಯಿತು. ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು.
ವಿದ್ಯಾರ್ಥಿನಿ ಸಾನ್ವಿ ಸಂವಿಧಾನ ದಿನದ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿ ಆಲ್ಸ್ಟನ್ ಡಿಸಿಲ್ವ ಭಾರತದ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು. ಶಾಲಾ ಮುಖ್ಯೋಪಾಧ್ಯಾಯ ವಂ ಫಾ ಕ್ಲಿಫರ್ಡ್ ಪಿಂಟೋ ಭಾರತ ಸಂವಿಧಾನದ ಕುರಿತು ಮಾಹಿತಿ ನೀಡಿ ನಾವೆಲ್ಲರೂ ಸಂವಿಧಾನಕ್ಕೆ ಬದ್ಧವಾಗಿರಬೇಕೆಂದು ನುಡಿದರು. ವಿದ್ಯಾರ್ಥಿನಿ ಲಹರಿ. ಕೆ ಕಾರ್ಯಕ್ರಮವನ್ನು ನಿರ್ವಹಿಸಿದರು. ಶಿಕ್ಷಕಿಯರಾದ ರೆನಿಟಾ ಲಸ್ರಾದೊ, ಸರಿತಾ ರೊಡ್ರಿಗಸ್ ಮತ್ತು ಬ್ಲೆಂಡಿನ್ ರೊಡ್ರಿಗಸ್ ಕಾರ್ಯಕ್ರಮಕ್ಕೆ ಸಹಕರಿಸಿದರು.