ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜದಲ್ಲಿ ಸುಮಾರು 17 ವರ್ಷ 5 ತಿಂಗಳು ಸೇವೆ ಸಲ್ಲಿಸಿದ ಶಿಕ್ಷಕಿ ನೇಮಮ್ಮ ವರ್ಗಾವಣೆಗೊಂಡಿದ್ದು, ಹಾಗೆಯೇ 9 ವರ್ಷಗಳ ಕಾಲ ಸೇವೆ ಸಲ್ಲಿಸಿದ ರೆನಿಲ್ಡಾ ಜೋಯ್ಸ್ ಮಥಾಯಸ್ ರವರು ಸೇವಾ ನಿವೃತ್ತಿ ಹೊಂದಿದ್ದು, ಇವರಿಗೆ ನವಂಬರ್ 28ರಂದು ಬೀಳ್ಕೊಡುಗೆ ಕಾರ್ಯಕ್ರಮವನ್ನು ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮದಲ್ಲಿ ಬಳಂಜ ಶಾಲಾ ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷರು ಚಂದ್ರಶೇಖರ್ ಪಿಕೆ, ಬಳಂಜ ಶಿಕ್ಷಣ ಟ್ರಸ್ಟ್ ನ ಕಾರ್ಯದರ್ಶಿ ಶ್ರೀ ರತ್ನರಾಜ್, ಟ್ರಸ್ಟಿಗಳಾದ ಬಿ ಪ್ರಮೋದ್ ಕುಮಾರ್ ಮತ್ತು ವಿನು ಬಳಂಜ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಸಹಶಿಕ್ಷಕರು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ಪೋಷಕರು ,ಮಕ್ಕಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕ ಮಲ್ಲಿಕಾರ್ಜುನ ಆರ್ ನಿರೂಪಿಸಿ, ಮುಖ್ಯೋಪಾಧ್ಯಾಯ ರಂಗಸ್ವಾಮಿ ಸಿ ಆರ್ ಎಲ್ಲರನ್ನು ಸ್ವಾಗತಿಸಿ, ಶಿಕ್ಷಕಿ ಕೀರ್ತಿ ವಂದಿಸಿದರು. ಎಲ್ಲಾ ಶಾಲಾ ಶಿಕ್ಷಕರು ಕಾರ್ಯಕ್ರಮದಲ್ಲಿ ಸಹಕರಿಸಿದರು.