ಬೆಳ್ತಂಗಡಿ: ನ. 26 ರಂದು ಸಂತ ತೆರೇಸಾ ಸಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆಯ ಪ್ರಯುಕ್ತ, ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಹಾಗೂ ಸಂತ ತೆರೇಸಾ ಸಂಯುಕ್ತ ಪದವಿಪೂರ್ವ ಕಾಲೇಜು ಇದರ ಆಶ್ರಯದಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾಲೇಜಿನ ಪ್ರಾಂಶುಪಾಲ ಭಗಿನಿ ಆರೋಗ್ಯ ಅಧ್ಯಕ್ಷತೆಯ ಸ್ಥಾನದಲ್ಲಿದ್ದು ಬಂದಿರುವ ಎಲ್ಲಾ ಅತಿಥಿ ಗಣ್ಯರನ್ನು ಪ್ರೀತಿಪೂರ್ವಕವಾಗಿ ಸ್ವಾಗತಿಸಿದರು.
ಕಾರ್ಯಕ್ರಮದ ಉದ್ಘಾಟಕರ ಮನು ಬಿ. ಕೆ. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಅಧ್ಯಕ್ಷರು ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ ಆಗಮಿಸಿದ್ದು, ದೀಪ ಬೆಳಗಿಸುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಿ ಕಾನೂನಿನ ಅರಿವನ್ನು ಮೂಡಿಸುವ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ವಸಂತ ಮರಕಡ ಅಧ್ಯಕ್ಷರು ವಕೀಲರ ಸಂಘ ಬೆಳ್ತಂಗಡಿ, ನವೀನ್ ಬಿ. ಕೆ
ಪ್ರಧಾನ ಕಾರ್ಯದರ್ಶಿಗಳು ವಕೀಲರ ಸಂಘ ಬೆಳ್ತಂಗಡಿ ಹಾಗೂ ಭಗಿನಿ ಲೀನಾ ಡಿಸೋಜಾ ಮುಖ್ಯೋಪಾಧ್ಯಾಯನಿ ಸಂತ ತೆರೇಸಾ ಪ್ರೌಢಶಾಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಗಳಾಗಿ ಬಿ. ಕೆ. ಧನಂಜಯ ರಾವ್ ವಕೀಲರು ಬೆಳ್ತಂಗಡಿ ಇವರು ಅಂತರಾಷ್ಟ್ರೀಯ ಮಹಿಳಾ ದೌರ್ಜನ್ಯ ತಡೆ ಹಾಗೂ ಸಂವಿಧಾನ ದಿನಾಚರಣೆಯ ಕುರಿತು ಕಾನೂನು ಮಾಹಿತಿಯನ್ನು ನೀಡಿದರು. ವಿಜ್ಞಾನ ವಿಭಾಗದ ಉಪನ್ಯಾಸಕಿ ಅರ್ಚನಾ ಕಾರ್ಯಕ್ರಮವನ್ನು ನಿರೂಪಿಸಿ, ಉಪನ್ಯಾಸಕಿ ದಿವ್ಯ ವಂದಿಸಿದರು. ಕಾನೂನು ಅರಿವು ಕಾರ್ಯಕ್ರಮದಲ್ಲಿ ಸಂತ ತೆರೇಸಾ ಪ್ರೌಢಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಂತ ತೆರೇಸ ಪದವಿಪೂರ್ವ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡರು. ಬಂದಿರುವ ಎಲ್ಲಾ ಅತಿಥಿ ಗಣ್ಯರಿಗೆ ನೆನಪಿನ ಕಾಣಿಕೆಯನ್ನು ನೀಡಲಾಯಿತು.