ಧರ್ಮಸ್ಥಳ: ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಕಲ್ಲೇರಿಯ ಸುರೇಶ್ ಗೌಡ((52 ವ) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಲ್ಪ ಕಾಲದ ಅಸೌಖ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಮೂರು ತಿಂಗಳ ಹಿಂದೆ ಅಮ್ಮ ಮರಣ ಹೊಂದಿದ ನಂತರ ಮಾನಸಿಕ ಅಸ್ವಸ್ಥಗೊಂಡು ಎರಡು ದಿನಗಳ ಹಿಂದೆ ಕಾಣೆಯಾಗಿದ್ದು, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಕೆಲಸದವರು ಹುಡುಕಾಟದಲ್ಲಿ ತೊಡಗಿಕೊಂಡಿದ್ದು, ನ. 29ರಂದು ಮನೆಯ ಬಾವಿಯಲ್ಲಿ ಮೃತದೇಹ ಪತ್ತೆಯಾಗಿದೆ. ಇವರು ಧರ್ಮಸ್ಥಳ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು.
ಮೃತರು ಪತ್ನಿ ಹೇಮಲತಾ, ಮಕ್ಕಳಾದ ಪುನೀತ್, ಪ್ರಜ್ವಲ್ ಇವರನ್ನು ಅಗಲಿದ್ದಾರೆ.
p>