ಮಿತ್ತಬಾಗಿಲು: ಸರಕಾರಿ ಪ್ರೌಢಶಾಲೆಯಲ್ಲಿ ವಿಶೇಷ ತರಗತಿ ಕಾರ್ಯಕ್ರಮದ ಉದ್ಘಾಟನೆ

0

ಮಿತ್ತಬಾಗಿಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ. ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಮುಂಡಾಜೆ ವಲಯದ ಮಿತ್ತಬಾಗಿಲು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಿಶೇಷ ತರಗತಿ ಕಾರ್ಯಕ್ರಮದ ಉದ್ಘಾಟನೆಯನ್ನು ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ತಾಲೂಕಿನ ಗೌರವಾನ್ವಿತ ಯೋಜನಾಧಿಕಾರಿ ಸುರೇಂದ್ರ ಉದ್ಘಾಟಿಸಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಟ್ಯೂಶನ್ ಕ್ಲಾಸ್ ತರಬೇತಿಯನ್ನು ನಡೆಸುತ್ತಿದ್ದು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿಶೇಷ ತರಬೇತಿಗಳು ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವಲ್ಲಿ ಸಹಕರಿಸುತ್ತವೆ. ಮಕ್ಕಳು ತರಬೇತಿಯಲ್ಲಿ ಭಾಗವಹಿಸಿ ಉತ್ತಮ ಅಂಕ ಗಳಿಸಿ ಶಾಲೆಗೆ ಕೀರ್ತಿ ತರಬೇಕೆಂದರು.

ಯೋಜನೆಯಿಂದ ಶಾಲೆಗೆ ಒದಗಿಸಲಾಗುವ ಅನುದಾನ ಮತ್ತು ಸುಜ್ಞಾನ ನಿಧಿ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಶಾಲಾ ಮುಖ್ಯೋಪಾಧ್ಯಾಯ ಗೋಪಾಲ ಈ ಕಾರ್ಯಕ್ರಮ ನಮ್ಮ ಗ್ರಾಮೀಣ ಪ್ರದೇಶದ ಮಕ್ಕಳಿಗೆ ಉತ್ತಮ ಅವಕಾಶಗಳಾಗಿದ್ದು ಪ್ರತಿಯೊಬ್ಬ ವಿದ್ಯಾರ್ಥಿಯು ವಿಶೇಷ ತರಗತಿಗೆ ತಪ್ಪಿಸಿದೆ ಪಾಲ್ಗೊಂಡು ಉತ್ತಮ ಅಂಕಗಳನ್ನು ಪಡೆಯಿರಿ ಎಂದು ಸಲಹೆಗಳನ್ನ ನೀಡಿದರು.

ಕಾರ್ಯಕ್ರಮದಲ್ಲಿ ಒಕ್ಕೂಟದ ಅಧ್ಯಕ್ಷ ಸುರೇಶ್, ವಿಶೇಷ ತರಗತಿಯ ಶಿಕ್ಷಕಿ ಶ್ವೇತಾ, ಸೇವಪ್ರತಿನಿಧಿ ವರಲಕ್ಷ್ಮೀ ಉಪಸ್ಥರಿದ್ದರು. ಸಮನ್ವಯಾಧಿಕಾರಿ ಮಧುರಾ ವಸoತ್ ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಮೇಲ್ವಿಚಾರಕ ಜನಾರ್ದನ್ ಸ್ವಾಗತಿಸಿ, ಶಿಕ್ಷಕಿ ಮಂಜುಳಾ ಧನ್ಯವಾದ ಮಾಡಿದರು.

p>

LEAVE A REPLY

Please enter your comment!
Please enter your name here