Site icon Suddi Belthangady

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿಗೆ ಆಯ್ಕೆ

ಬೆಳಾಲು : ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ 18ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ 2024ರ ಅಕಾಡೆಮಿ ಪ್ರಶಸ್ತಿಗೆ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ಆಯ್ಕೆಯಾಗಿದ್ದಾರೆ.

ಇವರು ಮರದ 2ಆಡಿ ಎತ್ತರದ ಕನ್ನಿಕಾ ಪರಮೇಶ್ವರಿ ಮೂರ್ತಿಯನ್ನು ರಚಿಸಿ ಪ್ರದರ್ಶನಕ್ಕೆ ಇಟ್ಟಿದ್ದರು. ದ.ಕ ಜಿಲ್ಲೆಯಿಂದ ಇವರ ಶಿಲ್ಪ ಕಲೆ ಆಯ್ಕೆಯಾಗಿದ್ದು, ಡಿಸೆಂಬರ್ ತಿಂಗಳಲ್ಲಿ

ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

Exit mobile version