

ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜದಲ್ಲಿ 9 ವರ್ಷಗಳ ಕಾಲ ಹಾಗೂ ಶಿಕ್ಷಣ ಇಲಾಖೆಯಲ್ಲಿ ಸುಮಾರು 25 ವರ್ಷಗಳ ಕಾಲ ಸೇವೆ ಸಲ್ಲಿಸಿದ ಶಿಕ್ಷಕಿ ರೆನಿಲ್ಡಾ ಜೋಯ್ಸ್ ಮಥಾಯಸ್ ಸೇವಾ ನಿವೃತ್ತಿ ಹೊಂದಿದ್ದು, ನ. 30ರಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಕಿರಣ್ ಕುಮಾರ್ ಕೆ.ಎಸ್ ಹಾಗೂ ಸಂಘಟನಾ ಕಾರ್ಯದರ್ಶಿ ಮಂಗಳ ಶಾಲೆಗೆ ಬಂದು ಅವರ ಸೇವೆಗೆ ಗೌರವವನ್ನು ಸಲ್ಲಿಸಿದರು. ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಸಹಶಿಕ್ಷಕರು ಉಪಸ್ಥಿತರಿದ್ದರು.