ಯುವವಾಹಿನಿ ಆಶ್ರಯದಲ್ಲಿ ಅಂತರ್ ಘಟಕ ಸಾಂಸ್ಕೃಕ ಸ್ಪರ್ಧೆ ಡೆನ್ನಾನ ಡೆನ್ನನ ಉದ್ಘಾಟನೆ

0

p>

ಬೆಳ್ತಂಗಡಿ: ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಅತಿಥ್ಯದಲ್ಲಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಸಹಯೋಗದಲ್ಲಿ ಡಿ. 1ರಂದು ಬೆಳ್ತಂಗಡಿ ಶ್ರೀ ಧ. ಮ. ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ. ಪೂಜಾರಿ ಧ್ವಜಾರೋಹಣದ ಮೂಲಕ ಚಾಲನೆ ನೀಡಿದರು.

ದಿ. ವಸಂತ ಬಂಗೇರ ಸಾಂಸ್ಕೃಕ ವೇದಿಕೆಯಲ್ಲಿ ನಡೆದ ಉದ್ಘಾಟನಾ ಸಮಾರಂಭವನ್ನು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ದೀಪ ಬೆಳಗಿಸಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಡೋಲು ಬಡಿಯುವ ಮೂಲಕ ಡೆನ್ನಾನಕ್ಕೆ ಚಾಲನೆ ನೀಡಿದರು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ಘಟಕದ ಅಧ್ಯಕ್ಷ ಸದಾಶಿವ ಊರ ವಹಿಸಿದ್ದರು. ಮಂಗಳೂರು ಫಾದರ್ ಮುಲ್ಲರ್ಸ್ ಆಸ್ಪತ್ರೆಯ ಅಸೋಸಿಯೇಟ್ ಪ್ರೊಫೆಸರ್ ಡಾ. ಹರ್ಷವರ್ಧನ್, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಅನಿಲ್ ಕುಮಾರ್, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಉಪಾಧ್ಯಕ್ಷ ಸುಂದರ ಪೂಜಾರಿ, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಸುಮತಿ ಪ್ರಮೋದ್ ಉಪಸ್ಥಿತರಿದ್ದರು. ವಿವಿಧ ಅಂತರ್ ಘಟಕಗಳ ಡೆನ್ನಾನ ಡೆನ್ನಾನ ಸಾಂಸ್ಕೃತಿಕ ಸ್ಪರ್ಧೆ ನಡೆಯಿತು.

ಮದ್ಯಾಹ್ನ ನಡೆದ ಡೆನ್ನಾನ ರಂಗ ಸನ್ಮಾನ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ವಿಧಾನ ಪರಿಷತ್ ಸದಸ್ಯ ಬಿ. ಕೆ. ಹರಿಪ್ರಸಾದ್ ಶುಭ ಕೋರಿದರು. ಶ್ರೀ ಗುರುದೇವ ವಿವಿದೋದ್ಧೇಶ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭಾ ಮಾನಿಂಜಾ ಉಪಸ್ಥಿತರಿದ್ದರು. ನರೇಶ್ ಕುಮಾರ್ ಸಸಿಹಿತ್ಲು ಇವರನ್ನು ಡೆನ್ನಾನ ಡೆನ್ನಾನ ರಂಗ ಸನ್ಮಾನ ನೀಡಿ ಗೌರವಿಸಲಾಯಿತು. ಸಾಧನೆ ಗೈದ ಡಾ. ರಾಜಾರಾಮ್ ಕೆ. ಬಿ., ಪದ್ಮನಾಭ ಕೋಟ್ಯಾನ್, ವಿನೋದ್ ಮಂಚಿ, ಬಿ. ಟಿ. ಮಹೇಶ್ಚಂದ್ರ ಇವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ಕುದ್ರೋಳಿ ಗುರು ಬೆಳದಿಂಗಳು ಫೌಂಡೇಶನ್ ಅಧ್ಯಕ್ಷ ಪದ್ಮರಾಜ್ ಆರ್. ಭಾಗವಹಿಸಿ ಶುಭ ಹಾರೈಸಿದರು.
ಸಂಜೆ ನಡೆದ ಸಮಾರೋಪ ಸಮಾರಂಭದ ಆಧ್ಯಕ್ಷತೆಯನ್ನು ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ. ಪೂಜಾರಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ರಕ್ಷಿತ್ ಶಿವರಾಂ, ಶ್ರೀ ಕ್ಷೇತ್ರ ಗೆಜ್ಜೆಗಿರಿ ಕ್ಷೇತ್ರದ ಗೌರವಾಧ್ಯಕ್ಷ ನಿವೃತ್ತ ಎಸ್. ಪಿ.ಪೀತಾಂಬಾರ ಹೇರಾಜೆ, ನಾರಾಯಣ ಗುರು ವಿಚಾರ ವೇದಿಕೆಯ ಅಧ್ಯಕ್ಷ ಸತ್ಯಜೀತ್ ಸುರತ್ಕಲ್, ಬೆಳ್ತಂಗಡಿ ಸುವರ್ಣ ಪ್ರತಿಷ್ಠಾಪನಾದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಉದ್ಯಮಿ ಅಭಿನಂದನ್ ಹರೀಶ್ ಕುಮಾರ್, ಕಿರುತೆರೆ ನಿರ್ದೇಶಕ ಸುಭಾಸ್ ಅರ್ವ, ಮುಂಬಾಯಿ ಉದ್ಯಮಿ ಸತೀಶ್ ಊರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಬೆಳ್ತಂಗಡಿ ಯುವ ಬಿಲ್ಲವ ವೇದಿಕೆಯ ಅಧ್ಯಕ್ಷ ಎಂ. ಕೆ. ಪ್ರಸಾದ್, ಯುವ ವಾಹಿನಿ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಗದೀಶ್ಚಂದ್ರ ಡಿ. ಕೆ. ಸಾಂಸ್ಕೃತಿಕ ನಿರ್ದೇಶಕರು ಹರೀಶ್ ಸುವರ್ಣ, ಡೆನ್ನಾನ ಡೆನ್ನನ ಪ್ರಧಾನ ಸಂಚಾಲಕ ಪ್ರಶಾಂತ್ ಮಚ್ಚಿನ, ಸಾಂಸ್ಕೃತಿಕ ನಿರ್ದೇಶಕ ಹರೀಶ್ ಗೇರುಕಟ್ಟೆ, ಕಾರ್ಯದರ್ಶಿ ಯಶೋಧರ ಮುಂಡಾಜೆ, ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ನಿತೀಶ್ ಕೋಟ್ಯಾನ್, ಯುವ ವಾಹಿನಿ ಮಹಿಳಾ ಸಂಚಾಲನಾ ಸಮಿತಿ ಅಧ್ಯಕ್ಷೆ ವನಿತಾ ಜನಾರ್ದನ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಯುವ ವಾಹಿನಿ 35 ಘಟಕಗಳ ಪದಾಧಿಕಾರಿಗಳು, ಸದಸ್ಯರು, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆಯ ಪದಾಧಿಕಾರಿಗಳು, ನಿರ್ದೇಶಕರು, ಮಾಜಿ ಅಧ್ಯಕ್ಷರು, ಮಾಜಿ ನಿರ್ದೇಶಕರು, ಸಮಾಜ ಭಾಂದವರು ಹಾಜರಿದ್ದರು.

LEAVE A REPLY

Please enter your comment!
Please enter your name here