


ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಇರುವ ಹಿನ್ನೆಲೆಯಲ್ಲಿ ಭಾರಿ ಮಳೆ ಮುನ್ಸೂಚನೆ ಇದ್ದು, ಮುಂಜಾಗ್ರತಾ ಕ್ರಮವಾಗಿ ಸರಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಡಿ.3ರಂದು ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮು ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.