ಉಜಿರೆ: ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನ, ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನ, ಉದ್ಭವ ಶ್ರೀ ಸುಬ್ರಹ್ಮಣೇಶ್ವರ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯ ಷಷ್ಠಿ ಪ್ರಯುಕ್ತ ಡಿ. 7 ರಂದು ವಿಶೇಷ ಪೂಜಾ ಕಾರ್ಯಕ್ರಮಗಳು ಉಜಿರೆಯ ಯು. ಶರತ್ ಕೃಷ್ಣ ಪಡ್ಡೆಟ್ನಾಯರ ಮಾರ್ಗದರ್ಶನದಲ್ಲಿ ವಿವಿಧ ವೈದಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಬೆಳಿಗ್ಗೆ ಶ್ರೀ ಮಹಾಗಣಪತಿ ದೇವರಿಗೆ ಅಭಿಷೇಕ, ಮಂಗಳಾರತಿ. ಶ್ರೀ ಸುಬ್ರಹ್ಮಣೇಶ್ವರ ದೇವರಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ, ಪಂಚಾಮೃತ ಕಾರ್ತಿಕ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ. ಮಧ್ಯಾಹ್ನ ಶ್ರೀ ಮಹಾಗಣಪತಿ ಅಭಿಷೇಕ, ಪವಮಾನ ಕಲಶಾಭಿಷೇಕ, ಶ್ರೀ ಸುಬ್ರಹ್ಮಣೇಶ್ವರ ದೇವರಿಗೆ ಮಹಾಪೂಜೆ, ಪ್ರಸಾದ ವಿತರಣೆ ನಂತರ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.