ಬಂದಾರು: ಡಿ. 2 ರಂದು ಬೆಳಿಗ್ಗೆ 10 ಗಂಟೆಗೆ ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ವಠಾರದಲ್ಲಿ ಬ್ರಹ್ಮಕಲಶೋತ್ಸವದ ಸಮಾಲೋಚನಾ ಸಭೆ ನಡೆಯಿತು. ಬ್ರಹ್ಮ ಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಗೌಡ ನಾಗಂದೋಡಿ ಅಧ್ಯಕ್ಷತೆ ವಹಿಸಿದರು.
ಬಾಲಕೃಷ್ಣ ಪೂಜಾರಿ ಬಜಗುತ್ತು ಕೊಯ್ಯೂರು ಮಾತನಾಡುತ್ತಾ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ವಿವಿಧ ವಿಭಾಗದ ಸಮಿತಿ ಪದಾಧಿಕಾರಿಗಳು, ಸ್ವಯಂ ಸೇವಕರು ಮನಃಪೂರ್ವಕವಾಗಿ ತೊಡಗಿಸಿಕೊಂಡು ತಮ್ಮ ಕರ್ತವ್ಯವನ್ನು ಸೇವೆ ಎಂದು ತಿಳಿದು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಶ್ರೀ ಕ್ಷೇತ್ರ ಆರಿಕೋಡಿ ಧರ್ಮದರ್ಶಿ ಹರೀಶ್ ಮಾರ್ಗದರ್ಶನ ನೀಡಿ, ಅರಿಕೋಡಿ ಶ್ರೀ ಕ್ಷೇತ್ರದ ಮೂಲಕ ಬ್ರಹ್ಮಕಲಶೋತ್ಸವ ಪುಣ್ಯ ಕಾರ್ಯಕ್ರಮಕ್ಕೆ ಸಂಪೂರ್ಣವಾಗಿ ಸಹಕಾರ ನೀಡುವುದಾಗಿ ಹೇಳಿದರು.
ದೇವಸ್ಥಾನದ ಪ್ರಧಾನ ಅರ್ಚಕ ಅನಂತರಾಮ ಶಬರಾಯ, ಅಭಿವೃದ್ಧಿ ಸಮಿತಿ, ಬ್ರಹ್ಮ ಕಲಶೋತ್ಸವ ಸಮಿತಿ, ಮಹಿಳಾ ಸಮಿತಿ ಹಾಗೂ ವಿವಿಧ ಸಮಿತಿ ಸಂಚಾಲಕ-ಸಹಸಂಚಾಲಕರು ಉಪಸ್ಥಿತರಿದ್ದರು.
ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಪರಪ್ಪಾಜೆ, ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅನುವಂಶಿಕ ಮೂಕ್ತೇಸರು ಕುಕ್ಕುಪ್ಪ ಗೌಡ, ತಿಮ್ಮಪ್ಪ ಗೌಡ ಸೋಣಕುಮೇರು, ಅಡಳಿತ ಮಂಡಳಿ ಅಧ್ಯಕ್ಷ ರಮೇಶ್ ಗೌಡ ಅಡ್ಡಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು.