ಉಜಿರೆ: ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಸಂಘದ 2023-24 ನೇ ಸಾಲಿನ ವಾರ್ಷಿಕ ಮಹಾ ಸಭೆ ಡಿ. 3 ರಂದು ಉಜಿರೆ ಶಾರದಾ ಮಂಟಪದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅರವಿಂದ ಕಾರಂತ್ ವಹಿಸಿದ್ದರು. ಕೋಶಾಧಿಕಾರಿ ಅಬೂಬಕ್ಕರ್ ಲೆಕ್ಕ ಪತ್ರ ವಾಚಿಸಿದರು. ಜೊತೆ ಕಾರ್ಯದರ್ಶಿ ಪ್ರಸಾದ್ ಬಿ. ಎಸ್. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
ಸಂಘದ ಪದಾಧಿಕಾರಿಗಳು, ಸದಸ್ಯರು, ವರ್ತಕರು ಹಾಜರಿದ್ದು ಸಲಹೆ ಸೂಚನೆ ನೀಡಿದರು. ಕಾರ್ಯದರ್ಶಿ ಲಕ್ಷ್ಮಣ ಗೌಡ ವಂದಿಸಿದರು.