ಬೆಳ್ತಂಗಡಿ: ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯ -45 ಕೆ.ಜಿ ವಿಭಾಗದಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಮೈಸೂರಿನ ಲಿಂಗರಾಜು ಮತ್ತು ಲತಾ ದಂಪತಿಗಳ ಮಗನಾದ ಶ್ರೇಯಸ್ ಸಿ ಲಿಂಗರಾಜು ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕಕ್ಕೆ ಭಾಜನರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ವಿದ್ಯಾರ್ಥಿಯ ಈ ಅದ್ಭುತ ಸಾಧನೆಗೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯ ಶಿವಪ್ರಸಾದ್ ಭಟ್ ಮತ್ತು ಬೋಧಕ ಬೋಧಕೇತರ ಸಿಬ್ಬಂದಿಯವರು ಅಭಿನಂದನೆ ಸಲ್ಲಿಸಿದ್ದಾರೆ.