ಪುತ್ತೂರು: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು 2024ನೇ ಸಾಲಿನ ರಾಷ್ಟ್ರೀಯ ಅರ್ಹತಾ ಪರೀಕ್ಷೆಯನ್ನು ಸರಕಾರವು 2025 ರ ಜನವರಿ ತಿಂಗಳಿನಲ್ಲಿ ನಡೆಸಲು ಉದ್ದೇಶಿಸಿರುತ್ತದೆ. ಅಲ್ಲದೇ PWD ಇಲಾಖೆಯ ಅಸಿಸ್ಟೆಂಟ್ ಎಕ್ಸಿಕ್ಯೂಟಿವ್ ಇಂಜಿನಿಯರ್(AEE) ನೇಮಕಾತಿಯ ಲಿಖಿತ ಪರೀಕ್ಷೆಯು ಸದ್ಯದಲ್ಲೇ ನಡೆಯಲಿರುವುದರಿಂದ ಇದಕ್ಕೆ ಪೂರಕವಾಗಿ ವಿದ್ಯಾಮಾತಾ ಅಕಾಡೆಮಿಯು ಒಂದು ತಿಂಗಳ ಅವಧಿಯಲ್ಲಿ ಆನ್ಲೈನ್ ಮೂಲಕ ತರಬೇತಿಯನ್ನು ನೀಡಲಿದ್ದು, ಈ ಎರಡು ಪರೀಕ್ಷೆಯನ್ನು ಎದುರಿಸಲಿರುವ ಅಭ್ಯರ್ಥಿಗಳು ತರಗತಿಗಳನ್ನು ಸದುಪಯೋಗಪಡಿಸಿಕೊಳ್ಳಬಹುದು.
ಕಳೆದ NET ಅರ್ಹತಾ ಪರೀಕ್ಷೆಯಲ್ಲಿ ಅಮೋಘ ಸಾಧನೆ ಮಾಡಿದ್ದ ಅಕಾಡೆಮಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ(KARTET), ಶಿಕ್ಷಕರ ನೇಮಕಾತಿ, ರಾಷ್ಟ್ರೀಯ ಅರ್ಹತಾ ಪರೀಕ್ಷೆ ಹಾಗೂ ಇತರೆ ಶಿಕ್ಷಕರ ನೇಮಕಾತಿ, ಉಪನ್ಯಾಸಕರ ನೇಮಕಾತಿಗೆ ಸಂಬಂದಿಸಿದ ಪರೀಕ್ಷೆಗಳಿಗೆ ತರಬೇತಿಯನ್ನು ನೀಡುತ್ತಾ ಬಂದಿರುವ ವಿದ್ಯಾಮಾತಾ ಅಕಾಡೆಮಿಯ 175ಕ್ಕೂ ಅಧಿಕ ಅಭ್ಯರ್ಥಿಗಳು ತಮ್ಮ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನೇಮಕಾತಿಗೊಂಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.
ರಾಷ್ಟ್ರೀಯ ಅರ್ಹತಾ ಪರೀಕ್ಷೆ(UGC-NET)ಯ ಕುರಿತು ಮಾಹಿತಿ: ರಾಷ್ಟೀಯ ಮಟ್ಟದಲ್ಲಿ ಉಪನ್ಯಾಸಕರಾಗಲು ನಡೆಯಲಿರುವ ಅರ್ಹತಾ ಪರೀಕ್ಷೆ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಮತ್ತು ಪ್ರಸ್ತುತ ವ್ಯಾಸಂಗ ಮಾಡುತ್ತಿರುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿ. 11
ಸಹಾಯಕ ಕಾರ್ಯಪಾಲಕ ಇಂಜಿನಿಯರ್ (KPSC-AEE) ಹುದ್ದೆಯ ನೇಮಕಾತಿಯ ಕುರಿತು: ಲೋಕೋಪಯೋಗಿ ಇಲಾಖೆ ನೇಮಕಾತಿಗೆ:- ಇಂಜಿನಿಯರಿಂಗ್ ವಿದ್ಯಾರ್ಹತೆ ಹೊಂದಿರಬೇಕು, ಲಿಖಿತ ಪರೀಕ್ಷೆಯ ಮೂಲಕ ನಡೆಯಲಿರುವ ಆಯ್ಕೆ ಪ್ರಕ್ರಿಯೆ, ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಈಗಾಗಲೇ ಕೊನೆಗೊಂಡಿರುತ್ತದೆ.
ಒಂದು ತಿಂಗಳ ಅವಧಿಯಲ್ಲಿ ನಡೆಯಲಿರುವ ತರಬೇತಿಯು ರಾತ್ರಿ 8 ರಿಂದ 9 ರವರೆಗೆ ನಡೆಯಲಿದೆ, ಆಸಕ್ತ ಅಭ್ಯರ್ಥಿಗಳು ಕೂಡಲೇ ಸಂಸ್ಥೆಯನ್ನು ಸಂಪರ್ಕಿಸಿ ದಾಖಲಾತಿಯನ್ನು ಪಡೆದುಕೊಳ್ಳಲು ಅಕಾಡೆಮಿಯ ಪ್ರಕಟಣೆ ತಿಳಿಸಿದೆ.
ಮಾಹಿತಿಗಾಗಿ: ಪುತ್ತೂರು ಕಛೇರಿ:
PH: 9148935808, 96204 68869 ಅಥವಾ
ಸುಳ್ಯ ಶಾಖೆ:
PH: 9448527606 ಅಥವಾ
ಕಾರ್ಕಳ ಶಾಖೆ:
PH:- 8310484380 ಸಂಪರ್ಕಿಸಬಹುದು.