ಕುಕ್ಕೇಡಿ: ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳಾ ದಿನಾಚರಣೆಯ ಅಂಗವಾಗಿ ನ. 30 ರಂದು ಪಂಚಾಯತ್ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಪುಟಾಣಿ ಮಕ್ಕಳ ಮನರಂಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.
ಪುಟಾಣಿ ಮಕ್ಕಳ ವಿವಿಧ ಮನರಂಜನೆ ನಡೆಯಿತು. ಬೆಳ್ತಂಗಡಿ ಸಿ. ಡಿ. ಪಿ. ಒ. ಪ್ರಿಯಾ ಅಗ್ನೇಸ್ ಚಕೋ, ಆರ್ಥಿಕ ಸಾಕ್ಷಾರತೆ ಇಲಾಖೆಯ ಉಷಾ ಕಾಮತ್ ಮಾಹಿತಿ ನೀಡಿದರು. ಪಂಚಾಯತ್ ಉಪಾಧ್ಯಕ್ಷೆ ಕುಸುಮ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ., ಪಂಚಾಯತ್ ಸದಸ್ಯರುಗಳು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶೇಖರ್, ಕುಕ್ಕೇಡಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಕಿಯರು, ಪೋಷಕರು, ಪಂಚಾಯತ್ ಸಿಬ್ಬಂದಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ ಸ್ವಾಗತಿಸಿದರು, ಜಗನ್ನಾಥ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು ಪಂಚಾಯತ್ ಸಿಬ್ಬಂದಿ ಪ್ರಶಾಂತ್ ವಂದಿಸಿದರು.