ಬೆಳ್ತಂಗಡಿ: ಪಡಂಗಡಿ ಗ್ರಾಮದ ಕನ್ನಡಿ ಕಟ್ಟೆ ಡೆಕ್ಕಲೊಟ್ಟು ಮನೆಯ ರಾಜೇಂದ್ರ ಪೂಜಾರಿ (45) ರಸ್ತೆ ಅಪಘಾತದಲ್ಲಿ ಮೃತ್ಯು.
ಬಂಟ್ವಾಳದಿಂದ ಬೆಳ್ತಂಗಡಿ ಕಡೆಗೆ ಪ್ರಯಾಣಿಸುತ್ತಿದ್ದ ಬೈಕ್ ಸವಾರ ಹಾಗೂ ಧರ್ಮಸ್ಥಳದಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಬಸ್ ನಡುವೆ ಡಿ.05ರಂದು ರಾತ್ರಿ ವಗ್ಗ ಸಮೀಪ ಅಪಾಘತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ನಡೆದಿದೆ.
ಮೃತರು ಪತ್ನಿ ಶಾಲಿನಿ ಹಾಗೂ 3 ಗಂಡು ಮಕ್ಕಳನ್ನು ಅಗಲಿದ್ದಾರೆ, ಇವರು ಕೂಲಿ ಕಾರ್ಮಿಕರಾಗಿದ್ದರು.
ಬಂಟ್ವಾಳ ಸಂಚಾರಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.