ಬೆಳ್ತಂಗಡಿ: ಮಾಜಿ ಶಾಸಕ ದಿ. ಕೆ.ವಸಂತ ಬಂಗೇರ ಅಭಿಮಾನಿ ಸಮಿತಿಯಿಂದ ಡಿ.9ರಂದು 3 ಗಂಟೆಗೆ ಗುರುನಾರಾಯಣ ಸಭಾ ಭವನದಲ್ಲಿ ಸಮಾಲೋಚನಾ ಸಭೆ ನಡೆಯಲಿದೆ. ಸಮಿತಿಯ ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಸಮಿತಿಯ ಪದಾಧಿಕಾರಿಗಳು, ಸದಸ್ಯರು ಮತ್ತು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕು ಎಂದು ವಸಂತ ಬಂಗೇರ ಅಭಿಮಾನಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಮನೋಹರ ಕುಮಾರ್ ಇಳಂತಿಲ ತಿಳಿಸಿದ್ದಾರೆ.