ಬೆಳ್ತಂಗಡಿ: 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ(175)ರಲ್ಲಿ ಡೋನ್ ಆಧಾರಿತ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡೋನ್ ತರಬೇತಿ ನೀಡುವ ಬಗ್ಗೆ ಅರ್ಜಿಯನ್ನು ಆಹ್ವಾನಿಸಲಾಗಿರುತ್ತದೆ.
ಅರ್ಜಿಗಳನ್ನು ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ ಪಡೆದು, ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿ . 12 ಆಗಿರುತ್ತದೆ.
ಅರ್ಹತೆಗಳು: ಅಭ್ಯರ್ಥಿಯು ದಕ್ಷಿಣ ಕನ್ನಡ ಜಿಲ್ಲೆಯ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಪಡೆಯಲು ಪುರುಷರಿಗೆ 18 ರಿಂದ 35 ವರ್ಷ, ಮಹಿಳೆಯರಿಗೆ 18 ರಿಂದ 40 ವರ್ಷಗಳು ಮೀರತಕ್ಕದ್ದಲ್ಲ.
ಅಭ್ಯರ್ಥಿಯ ಕುಟುಂಬದ ಆದಾಯ ರೂ.2.50 ಲಕ್ಷಗಳನ್ನು ಮೀರಬಾರದು. ಮೂಲ ನಿವಾಸಿ ಮತ್ತು ಅಲೆಮಾರಿ/ಅರೆ ಅಲೆಮಾರಿ. ಸೂಕ್ಷ್ಮ ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದ ಯುವಕ/ ಯುವತಿಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಅಭ್ಯರ್ಥಿಯು ತರಬೇತಿಯ ನೋಂದಣಿ ಸಮಯದಲ್ಲಿ ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ತೇರ್ಗಡೆಗೊಂಡ ಅಂಕಪಟ್ಟಿ ಹಾಗೂ ಆಧಾರ್ ಕಾರ್ಡ್ ನ್ನು ಸಲ್ಲಿಸತಕ್ಕದ್ದು. ಅಭ್ಯರ್ಥಿಯು ತರಬೇತಿ ನೀಡುವ ಸ್ಥಳಕ್ಕೆ ಬರುವ ಪ್ರಯಾಣ ವೆಚ್ಚವನ್ನು ಇಲಾಖೆಯಿಂದ ಭರಿಸುವುದಿಲ್ಲ. ಅಭ್ಯರ್ಥಿಗೆ ತರಬೇತಿ ಅವಧಿಯಲ್ಲಿ ಯಾವುದೇ ಶಿಷ್ಯವೇತನ ನೀಡುವುದಿಲ್ಲ.