ಬೆಳ್ತಂಗಡಿ: ಗರ್ಡಾಡಿ ಗ್ರಾಮದ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಪುನರ್ ನಿರ್ಮಾಣಕ್ಕೆ ಹಾಗೂ ಬಂಗಾಡಿ ಭಗವಾನ್ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ಜೀರ್ಣೋದ್ಧಾರಕ್ಕೆ ಕರ್ನಾಟಕ ಸರ್ಕಾರ 95.58 ಲಕ್ಷ ಅನುದಾನ ಬಿಡುಗಡೆ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಕಾಂಗ್ರೆಸ್ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರಿಗೆ ಸಮಾಜದ ಪರವಾಗಿ ತಾಲೂಕು ಕೆ. ಡಿ. ಪಿ. ಸದಸ್ಯ ಸುನಿಲ್ ಕುಮಾರ್ ಜೈನ್ ಅಳದಂಗಡಿ, ತಾಲೂಕು ಅರೋಗ್ಯ ರಕ್ಷಾ ಸಮಿತಿ ಸದಸ್ಯ ವೀರೇಂದ್ರ ಕುಮಾರ್ ಜೈನ್, ಬೆಳ್ತಂಗಡಿ ರತ್ನತ್ರಯ ಸಂಘದ ಪದಾಧಿಕಾರಿ ಕೆ. ಜಯಕೀರ್ತಿ ಜೈನ್ ಕೃತಜ್ಞತೆ ಸಲ್ಲಿಸಿದ್ದಾರೆ.