ಕಕ್ಕಿಂಜೆ: ರೀಚಿಂಗ್ ದಿ ಅನ್ರೀಚ್ ಎಂಬ ಧ್ಯೇಯದೊಂದಿಗೆ ಗ್ರಾಮೀಣ ಪ್ರದೇಶದ ಜನರಿಗೆ ಆಧುನಿಕ ಆರೋಗ್ಯ ಸೇವೆ ಒದಗಿಸುವ ಕನಸಿನೊಂದಿಗೆ 1999ರಲ್ಲಿ ಕಕ್ಕಿಂಜೆಯಲ್ಲಿ ಶ್ರೀ ಕೃಷ್ಣ ಆಸ್ಪತ್ರೆ ಸಣ್ಣ ವೈದ್ಯಕೀಯ ಚಿಕಿತ್ಸಾಲಯ ಆರಂಭಿಸಿದ್ದು, ಈಗ ಹೊಸದೊಂದು ಮೈಲಿಗಲ್ಲನ್ನು ತಲುಪಿದೆ.
ಡಿ.7ರಂದು ಬೆಳಿಗ್ಗೆ ಆಸ್ಪತ್ರೆಯಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಸಹಯೋಗದಲ್ಲಿ ನೂತನ ತುರ್ತು ಚಿಕಿತ್ಸಾ ವೈದ್ಯಕೀಯ ಕೇಂದ್ರದ ಉದ್ಘಾಟನೆಗೊಂಡಿತು. ಬೆಂಗಳೂರಿನ ಆದಮ್ಯ ಚೇತನ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಡಾ. ತೇಜಸ್ವಿನಿ ಅನಂತಕುಮಾರ್ ಈ ಹೊಸ ಕೇಂದ್ರವನ್ನು ಉದ್ಘಾಟಿಸಿದರು. ಪಶ್ಚಿಮಘಟ್ಟ ತಪ್ಪಲಿನ ಹಾಗೂ ಮೇಲಿನ ಭಾಗದ ಜನರಿಗೆ ತುರ್ತು ಸಂದರ್ಭಗಳಲ್ಲಿ ವೈದ್ಯಕೀಯ ಸಲಹೆ, ಚಿಕಿತ್ಸೆ ಪಡೆಯುವುದು ದುಸ್ತರವಾದ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಕಡಿದಾದ ಕಚ್ಛಾ ರಸ್ತೆಗಳಲ್ಲಿ ವಾಹನ ಅಪಘಾತಗಳು, ಕೃಷಿ ಕೆಲಸದ ಸಂದರ್ಭಗಳಲ್ಲಿ ಎದುರಾಗುವ ಅನಾಹುತಗಳು, ವನ್ಯ ಜೀವಿ ದಾಳಿ, ಆತ್ಮಹತ್ಯೆ ಯತ್ನ ಇತ್ಯಾದಿ ವೈದ್ಯಕೀಯ ತುರ್ತು ಪರಿಸ್ಥಿತಿಗಳು, ಗುಡ್ಡಗಾಡು ಪ್ರದೇಶಗಳಲ್ಲಿ ನಡೆಯಲು ಸಾಧ್ಯವಿಲ್ಲದ ಅಶಕ್ತರಿಗೆ, ಆಸ್ಪತ್ರೆಗೆ ಬರಲು ಸಾಧ್ಯವಿಲ್ಲದ ರೋಗಿಗಳಿಗೆ ಶ್ರೀಕೃಷ್ಣ ಯೋಗಕ್ಷೇಮ ಅಂಬುಲೆನ್ಸ್ ಮೂಲಕ ವೈದ್ಯಕೀಯ ಸಿಬ್ಬಂದಿಗಳು ಮನೆಬಾಗಿಲಿಗೆ ಹೋಗಿ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪ್ರಾಸ್ತಾವಿಕ ಮಾತನಾಡಿದ ಡಾ. ಮುರಳಿಕೃಷ್ಣ ಇರ್ವತ್ರಾಯ ಹೇಳಿದರು.
ವೇದಿಕೆಯಲ್ಲಿ ರಾಜ್ಯ ವಿಧಾನಪರಿಷತ್‌ನ ಉಪಸಭಾಪತಿ ಎಂ.ಕೆ. ಪ್ರಾಣೇಶ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದರು. ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ವಿಧಾನಪರಿಷತ್ ಮಾಜಿ ಸದಸ್ಯ ಕೆ. ಹರೀಶ್ ಕುಮಾರ್, ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಇದರ ರೀಜನಲ್ ಚೀಫ್ ಆಪರೇಟಿಂಗ್ ಆಫೀಸರ್ ಸಗೀರ್ ಸಿದ್ದಿಕಿ, ಎಮರ್ಜೆನ್ಸಿ ಮೆಡಿಸಿನ್ ವಿಭಾಗದ ಮುಖ್ಯಸ್ಥ ಡಾ. ಜೀಧು ರಾಧಾಕೃಷ್ಣನ್, ಎಸ್‌ಕೆಆರ್‌ಡಿಪಿ ಧರ್ಮಸ್ಥಳ ವಿಮಾ ವಿಭಾಗದ ಪ್ರಾದೇಶಿಕ ನಿರ್ದೇಶಕ ವಸಂತ ಸಾಲ್ಯಾನ್, ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾರದಾ ಹಾಗೂ ನೆರಿಯ ಸೈಂಟ್ ಥಾಮಸ್ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ತ್ರೇಸಿಯಾ ಕೆ.ಪಿ. ಧರ್ಮಸ್ಥಳದ ವಸಂತ ಮನೆಗಾರ್, ವೈದ್ಯಕೀಯ ನಿರ್ದೇಶಕ ಡಾ. ವಂದನಾ ಎಂ. ಇರ್ವತ್ರಾಯ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಕಾರ್ಯಕ್ರಮವನ್ನು ಡಾ. ಮುರುಳಿಕೃಷ್ಣ ಇರ್ವಾತ್ರಾಯ ಸ್ವಾಗತಿಸಿ, ಡಾ.ವಿದಿಶ್ರೀ ಮತ್ತು ಗುರುಪ್ರಸಾದ್ ನಿರೂಪಿಸಿ, ಡಾ. ಅರ್ಪಿತಾ ವಂದಿಸಿದರು.