ಶಿಶಿಲ: ಸುಮಾರು 70 ವರ್ಷಗಳ ಹಿಂದೆ ಸ್ಥಾಪನೆಗೊಂಡ ಶಿಶಿಲ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಶಿಥಿಲಗೊಂಡಿದ್ದು, ನೂತನ ಕಟ್ಟಡ ನಿರ್ಮಾಣಕ್ಕೆ ಯೋಜನೆ ಸಿದ್ಧವಾಗಿದ್ದು, ಹಳೆ ವಿದ್ಯಾರ್ಥಿಗಳು ಒಂದಾಗಿ ಶಾಲೆಯ ಏಳಿಗೆಗೆ ಪಣ ತೊಟ್ಟಿದ್ದು, ಸಾರ್ವಜನಿಕರಿಂದ ಸಹಕಾರದ ನಿರೀಕ್ಷೆಯೊಂದಿಗೆ ಶಿಲಾನ್ಯಾಸ ಕಾರ್ಯಕ್ರಮವನ್ನು ಹಳೆವಿದ್ಯಾರ್ಥಿಯಾದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಶಿವರಾಮ ಶಿಶಿಲ ನೆರವೇರಿಸಿದರು.
ಈ ಸಂಧರ್ಭದಲ್ಲಿ ಶಿಶಿಲೇಶ್ವರ ದೇವಳ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷ ಶ್ರೀನಿವಾಸ್ ಮೂಡೆತ್ತಾಯ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಮೋಹನ್, ಪಂಚಾಯತ್ ಅಧ್ಯಕ್ಷ ಸುಧೀನ್ ಡಿ, ಶಾಲಾ ಮುಖ್ಯ ಶಿಕ್ಷಕಿ ರತ್ನ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕರುಣಾಕರ ಶಿಶಿಲ, ಹತ್ಯಡ್ಕ ಪ್ರಾ ಕೃ ಪ ಸ ಸಂಘದ ನಿರ್ದೇಶಕ ಕೊರಗಪ್ಪ ಗೌಡ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ, ನಿವೃತ ಶಿಕ್ಷಕಿ ಶಾರದಾ ಕೆ ವಿ, ಶಾಲಾ ಹಳೆ ವಿದ್ಯಾರ್ಥಿಗಳು, ಶಿಕ್ಷಕರು, ಊರವರು ಉಪಸ್ಥಿತರಿದ್ದರು. ಶೀಲನ್ಯಾಸದ ಪೌರೋಹಿತ್ಯವನ್ನು ಶ್ರೀಪತಿ ನೆಲ್ಲಿತ್ತಾಯ ನೆರವೇರಿಸಿದರು. ಮುಖ್ಯ ಅತಿಥಿಗಳನ್ನು ಶಾಲಾ ಮುಖ್ಯ ಶಿಕ್ಷಕಿ ರತ್ನ ಸ್ವಾಗತಿಸಿದರು.