Site icon Suddi Belthangady

ಗ್ರಾಮ ಪಂಚಾಯತ್ ನೌಕರರ ಅನಿರ್ದಿಷ್ಟಾವಧಿ ಪ್ರತಿಭಟನೆ – ಮೂರು ತಿಂಗಳಲ್ಲಿ ಸರಕಾರಕ್ಕೆ ವರದಿ ನೀಡುವಂತೆ ತೀರ್ಮಾನ, ನ್ಯಾಯಯುತ ಹೋರಾಟಕ್ಕೆ ಸರಕಾರ ಸ್ಪಂದನೆ.

ಬೆಳ್ತಂಗಡಿ:ಗ್ರಾಮೀಣಾಭಿವೃದ್ಧಿ ಹಾಗು ಪಂಚಾಯತ್ ರಾಜ್ ಇಲಾಖೆ ಸ್ಥಳೀಯ ಆಡಳಿತ ಗ್ರಾಮ ಪಂಚಾಯತ್ ನೌಕರರ ಮೂಲ ಬೇಡಿಕೆಯಾದ ಸಿ ಮತ್ತು ಡಿ ದರ್ಜೆಯ ಸ್ಥಾನಮಾನ ನೀಡಿ ವೇತನ ಶ್ರೇಣಿ ನಿಗದಿಪಡಿಸುವಂತೆ ಒತ್ತಾಯಿಸಿ ನ.27 ರಂದು ಬೆಂಗಳೂರು ಫ್ರೀಡಂ ಪಾರ್ಕ್ ಮೈದಾನದಲ್ಲಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘ ಆರ್ ಡಿ ಪಿ ಆರ್ ರಾಜ್ಯಸಮಿತಿ ಬೆಂಗಳೂರು ರಾಜ್ಯಾಧ್ಯಕ್ಷ ಡಾ. ದೇವಿಪ್ರಸಾದ್ ಬೊಲ್ಮ ಧರ್ಮಸ್ಥಳ ನೇತೃತ್ವದಲ್ಲಿ ಅನಿರ್ದಿಷ್ಟವಾದಿ ಹೋರಾಟ ನಡೆಸಿದ್ದರು.

ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿಗಾಗಿ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರ ನಿರ್ದೇಶನದಂತೆ ಸರ್ಕಾರದ ಪರವಾಗಿ ಕರ್ನಾಟಕ ಸರ್ಕಾರ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಆಗಮಿಸಿ, ಬೇಡಿಕೆ ಹಾಗೂ ಸಮಸ್ಯೆಯನ್ನು ಆಲಿಸಿ ಪಂಚಾಯತ್ ರಾಜ್ ಸಚಿವರ ಗಮನಕ್ಕೆ ತಂದು ಬಗೆಹರಿಸುವಂತೆ ತಿಳಿಸಿದರು ಹಾಗೂ ಸಚಿವರ ಸೂಚನೆಯಂತೆ ಪಂಚಾಯತ್ ರಾಜ್ ಆಯುಕ್ತಾಲಯದಿಂದ ಮಾನ್ಯ ಆಯುಕ್ತರ ಪರವಾಗಿ ನಿರ್ದೇಶಕ ಅಮರೇಶ್ ಕುಮಾರ್ ಉಪ ನಿರ್ದೇಶಕ ಚಂದ್ರಪ್ಪ ಆಗಮಿಸಿ ನಿಮ್ಮ ಸಮಸ್ಯೆಗಳ ಬಗ್ಗೆ ಚರ್ಚಿಸುವ ಕುರಿತು ಸರಕಾರದ ಮಟ್ಟದಲ್ಲಿ ಸಭೆ ಕರೆದಿರುವ ಬಗ್ಗೆ ಆದೇಶ ಪತ್ರವನ್ನು ನೀಡಿ ಪ್ರತಿಭಟನೆಯನ್ನು ಹಿಂಪಡೆಯುವಂತೆ ತಿಳಿಸಿದರು. ಈ ಬಗ್ಗೆ ಡಿ 4ರಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಆಯುಕ್ತರಾದ ಅರುಂಧತಿ ಚಂದ್ರಶೇಖರ್ ಅಧ್ಯಕ್ಷತೆಯಲ್ಲಿ ಸಭೆ ಕರೆದು ನೌಕರ ಸಂಘದ ನಿಯೋಗದೊಂದಿಗೆ ಸುದೀರ್ಘವಾದ ಚರ್ಚೆ ನಡೆಸಿ ಗ್ರಾಮ ಪಂಚಾಯತಿ ನೌಕರರ ಬೇಡಿಕೆಯನ್ನು ಈಡೇರಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಸಮಿತಿ ರಚಿಸಿ ಮೂರು ತಿಂಗಳಲ್ಲಿ ಸರಕಾರಕ್ಕೆ ವರದಿ ನೀಡುವಂತೆ ಸಭೆಯಲ್ಲಿ ತೀರ್ಮಾನಿಸಿದರು. ಹಾಗಾಗಿ ಗ್ರಾಮ ಪಂಚಾಯತಿ ನೌಕರರು ನಡೆಸಿದ ನ್ಯಾಯಯುತ ಹೋರಾಟಕ್ಕೆ ಸರಕಾರ ಸ್ಪಂದನೆ ದೊರಕಿದೆ.

ಸರಕಾರದ ಭರವಸೆಯ ಮೇಲೆ ರಾಜ್ಯದ ಗ್ರಾಮ ಪಂಚಾಯಿತಿ ನೌಕರರು ಸಮಿತಿಯ ನಿರ್ಧಾರ ಹಾಗೂ ಸಚಿವರು ತೀರ್ಮಾನಕ್ಕೆ ರಾಜ್ಯದ ಗ್ರಾಮ ಪಂಚಾಯತಿ ನೌಕರರು ಕಾಯುತ್ತಿದ್ದಾರೆ. ಸಭೆಯಲ್ಲಿ ಡಾ. ಅರುಂಧತಿ ಚಂದ್ರಶೇಖರ್ (ಭಾ.ಆ.ಸೇ) ಆಯುಕ್ತರು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಬೆಂಗಳೂರು, ಡಾ. ಪ್ರತೀಕ್ ಬಾಯರ್ (ಭಾ. ಆ. ಸೇ.) ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿಲ್ಲಾ ಪಂಚಾಯತ್ ಉಡುಪಿ, ಅಮರೇಶ ಆರ್.ನಿರ್ದೇಶಕರು (ಆಡಳಿತ-1)ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಬೆಂಗಳೂರು, ಶ್ರೀ ಚಂದ್ರಪ್ಪ ಎಂ.ಉಪ ನಿರ್ದೇಶಕರು, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಬೆಂಗಳೂರು. ಎನ್.‌ನೋಮೇಶ್‌ ಕುಮಾರ್‌ ನಿರ್ದೇಶಕರು ಪಂಚಾಯತ್‌ ರಾಜ್‌, ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವಾಲಯ, ಬೆಂಗಳೂರು. ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯಿತಿ ನೌಕರ ಸಂಘದ ರಾಜ್ಯಾಧ್ಯಕ್ಷ ಡಾ. ದೇವಿ ಪ್ರಸಾದ್ ಬೊಲ್ಮ, ಸಂಘದ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಆರ್ ಕುಲಾಲ್, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸತೀಶ್ ನಾರಾವಿ, ಧಾರವಾಡ ಜಿಲ್ಲಾಧ್ಯಕ್ಷ ಕಿರಣ್ ಕಲ್ಲೂರು, ಉಡುಪಿ ಜಿಲ್ಲಾಧ್ಯಕ್ಷ ಪ್ರಶಾಂತ್ ತೆಂಕನಾಡಿರು, ಹಾವೇರಿ ಜಿಲ್ಲಾಧ್ಯಕ್ಷ ವಿಜಯಕುಮಾರ್ ಮಿಲ್ಲಿ, ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಗಂಗಾಧರ್ ನಾಯ್ಕ, ಚಿಕ್ಕಬಳ್ಳಾಪುರ ಜಿಲ್ಲಾಧ್ಯಕ್ಷ ಸುದರ್ಶನ್, ಆಯುಕ್ತಾಯದ ಮುಂಭಾಗ ರಾಜ್ಯ ಸಂಘದ ಪದಾಧಿಕಾರಿಗಳು ಜಿಲ್ಲಾ ಸಂಘದ ಪದಾಧಿಕಾರಿಗಳು ತಾಲೂಕು ಸಂಘದ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Exit mobile version