

ಬಂದಾರು: ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಜ. 7 ರಿಂದ 12 ರವರೆಗೆ ನಡೆಯಲಿದೆ. ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತದಲ್ಲಿ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನೆರವೇರಿತು.
ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಸಂಚಾಲಕರಾದ ಬಾಲಕೃಷ್ಣ ಪೂಜಾರಿ ಬಜಗುತ್ತು, ಸತ್ಯಶಂಕರ ಮಯ್ಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಮಹಾಬಲ ಗೌಡ, ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ, ಕೋಶಾಧಿಕಾರಿ ಕೇಶವ ಗೌಡ ಕೊಂಗುಜೆ, ಅನುವಂಶೀಯ ಆಡಳಿತ ಮೊಕ್ತೇಶರರಾದ ಕುಕ್ಕಪ್ಪ ಗೌಡ, ಆಡಳಿತ ಮಂಡಳಿ ಅಧ್ಯಕ್ಷರಾದ ರಮೇಶ್ ಗೌಡ ಅಡ್ಡಾರು, ಕಾರ್ಯದರ್ಶಿ ಉಮೇಶ್ ಗೌಡ ಅಂಗಡಿ ಮಜಲು, ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಹೊನ್ನಪ್ಪ ಗೌಡ, ಭಜನಾ ಮಂಡಳಿ ಅಧ್ಯಕ್ಷ ಲಕ್ಷ್ಮಣ ಗೌಡ ಫಲಸದಕೋಡಿ, ಮಹಿಳಾ ಮಂಡಳಿ ಅಧ್ಯಕ್ಷ ಶ್ವೇತಾ ಹಾರ್ತ್ಯಾರು ಹಾಗೂ ಪದಾಧಿಕಾರಿಗಳು, ಸಮಿತಿ ಸದಸ್ಯರು ಉಪಸ್ಥಿತರಿದ್ದರು.