Site icon Suddi Belthangady

ಉಜಿರೆ: ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ ‘ಬನ್ನಿ’ ಉದ್ಘಾಟನೆ

ಉಜಿರೆ: ಡಿ. 9 ರಂದು “ಮಕ್ಕಳ ಬಾಲ್ಯದಲ್ಲಿಯೇ ಸಣ್ಣ ವಯಸ್ಸಿನಲ್ಲಿ ಇಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಶಿಸ್ತನ್ನು ಮೂಡಿಸಿಕೊಳ್ಳಬಹುದು” ಎಂದು ಉಜಿರೆ ಎಸ್. ಡಿ. ಎಮ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಹಾಗೂ ರೇಂಜರ್ ಲೀಡರ್ ಆಗಿರುವ ಅಂಕಿತ ಹೇಳಿದರು.

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳಿಗೆ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ 3 ರಿಂದ 6 ವರ್ಷದ ವಿದ್ಯಾರ್ಥಿಗಳ ‘ಬನ್ನಿ’ ಉದ್ಘಾಟನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನೊರ್ವ ಅತಿಥಿಗಳಾಗಿ ಬೆಳ್ತಂಗಡಿಯ ಸ್ಥಳೀಯ ಸಂಘದ ಕಾರ್ಯದರ್ಶಿ ಪ್ರಮೀಳಾ ವಿದ್ಯಾರ್ಥಿಗಳನ್ನುದ್ದೇಶಿಸಿ ಹಿತನುಡಿಗಳನ್ನಾಡಿ ಅಭಿನಯಗೀತೆ ಕಲಿಸಿದರು.

ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ. ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಶಿಕ್ಷಕಿ ರವೀನ ಹಾಗೂ ಮಮತಾ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ. ಜಿ ಸ್ವಾಗತಿಸಿ, ಶಿಕ್ಷಕಿ ಸುವಿನ ವಂದಿಸಿದರು.

Exit mobile version