

ಬೆಳ್ತಂಗಡಿ: ಮಾಜಿ ಶಾಸಕ ಕೆ. ವಸಂತ ಬಂಗೇರ ಅಭಿಮಾನಿ ಸಮಿತಿಯ ಸಭೆ ಡಿ.9ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸಭಾ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಬಂಗೇರ ಅಭಿಮಾನಿ ಸಮಿತಿ ಅಧ್ಯಕ್ಷ ಈಶ್ವರ ಭಟ್ ಮಾಯಿಲತ್ತೋಡಿ ವಹಿಸಿದ್ದರು.
ಸಭೆಯಲ್ಲಿ ಬಂಗೇರರ ಹುಟ್ಟು ಹಬ್ಬದ ಸಂದರ್ಭದಲ್ಲಿ ಪ್ರತಿ ವರ್ಷದಂತೆ ಜ. 15ರಂದು ಬೃಹತ್ ರಕ್ತದಾನ ಶಿಬಿರ ಮತ್ತು ಸಭಾ ಕಾರ್ಯಕ್ರಮವನ್ನು ಶ್ರೀ ಗುರುನಾರಾಯಣ ಸಂಕೀರ್ಣದ ಸಭಾ ಭವನದಲ್ಲಿ ನಡೆಸುವುದು ಮತ್ತು ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡುವುದು ಎಂದು ತೀರ್ಮಾನ ಮಾಡಲಾಯಿತು ಹಾಗೂ ಸಮಿತಿಯ ಮುಂದಿನ ಕಾರ್ಯಚಟುವಟಿಗೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ. ಸಮಿತಿಯ ಪ್ರಧಾನ ಕಾರ್ಯದರ್ಶಿ ಮನೋಹರ್ ಕುಮಾರ್ ಇಳಂತಿಲ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ಜಿ. ಪ. ಮಾಜಿ ಸದಸ್ಯ ಶೇಖರ ಕುಕ್ಕೇಡಿ ವಂದಿಸಿದರು. ಸಮಿತಿಯ ಪಧಾಧಿಕಾರಿಗಳು, ಸದಸ್ಯರು, ಅಭಿಮಾನಿಗಳು ಹಾಜರಿದ್ದು ಸಲಹೆ ಸೂಚನೆ ನೀಡಿದರು.