

ಅರಸಿನಮಕ್ಕಿ: ಹೊಸ್ತೋಟ ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣ ಶಿಬಿರ ಡಿ. 7 ರಂದು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಿರಿಯ ವಿದ್ಯಾರ್ಥಿ ಸಂಘ ಇವರ ಸಹಭಾಗಿತ್ವದಲ್ಲಿ ನ್ಯೂ ವಿಷನ್ ಜನರೇಷನ್ ಪ್ರೋಗ್ರಾಮ್ ಕಾರ್ಯಕ್ರಮದಡಿಯಲ್ಲಿ 2.5 ಏನ್. ವಿ. ಜಿ. ಐ ಮಿತ್ರ ಸುರತ್ಕಲ್ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂದತ್ವ ವಿಭಾಗ )ಇವರ ಜಂಟಿ ಆಶ್ರಯದಲ್ಲಿ ನಡೆಯಿತು.
ಶಿಬಿರದ ಉದ್ಘಾಟನೆಯನ್ನು ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶ್ರೀಕರ ಭಿಡೆ ನೆರವೇರಿಸಿದರು. ಎಸ್. ಡಿ. ಎಂ. ಸಿ ಅಧ್ಯಕ್ಷ ಮುರಳಿಧರ್ ಶೆಟ್ಟಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ 2.5 ಏನ್. ವಿ. ಜಿ. ಐ ಮಿತ್ರ ಸಂಸ್ಥೆಯ ವ್ಯವಸ್ಥಾಪಕರಾದ ರಾಮಚಂದ್ರ, ಶಾಲಾ ಮುಖ್ಯ ಶಿಕ್ಷಕಿ ಮಾಲತಿ, ಎಸ್. ಡಿ. ಎಂ. ಸಿ ಸದಸ್ಯರು, ಹಳೇ ವಿದ್ಯಾರ್ಥಿಗಳು, ಉಪಸ್ಥಿತರಿದ್ದರು. ಗ್ರಾಮಸ್ಥರು, ಸುತ್ತ ಮುತ್ತಲಿನ ಗ್ರಾಮದ ಅನೇಕ ಜನ ಆಗಮಿಸಿ ಶಿಬಿರದ ಪ್ರಯೋಜನ ಪಡೆದುಕೊಂಡರು. ಸ್ವಾಗತ, ನಿರೂಪಣೆ, ಮತ್ತು ಧನ್ಯವಾದವನ್ನು ಶಾಲಾ ಹಿರಿಯ ಶಿಕ್ಷಕಿ ಜಯಂತಿ ನಿರ್ವಹಿಸಿದರು.