Site icon Suddi Belthangady

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬ- ವಾರ್ಷಿಕೋತ್ಸವ ಸಂಭ್ರಮ

ಬೆಳ್ತಂಗಡಿ: ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ. 10 ರಂದು ಬೆಳ್ಳಿ ಹಬ್ಬದ ಪ್ರಯುಕ್ತ ವಾರ್ಷಿಕೋತ್ಸವ ಸಂಭ್ರಮವನ್ನು ಆಚರಿಸಲಾಯಿತು. ವಾಣಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕುಶಾಲಪ್ಪ ಗೌಡರ ಅಧ್ಯಕ್ಷತೆಯಲ್ಲಿ ನಡೆದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ ಶೆಟ್ಟಿ ಉದ್ಘಾಟಿಸಿದರು.

ಮುಖ್ಯ ಅತಿಥಿಯಾಗಿ ಎಸ್. ವಿ. ಎಸ್. ಟೆಂಪಲ್ ಪಿ. ಯು ಕಾಲೇಜಿನ ಪ್ರಿನ್ಸಿಪಾಲ್ ಗಂಗಾಧರ್ ಆಳ್ವ, ವಾಣಿ ಶಿಕ್ಷಣ ಸಂಸ್ಥೆಗಳ ಗೌರವಧ್ಯಕ್ಷ ಪದ್ಮ ಗೌಡ, ಬೆಳ್ತಂಗಡಿಯ ಪ್ರಮುಖ ತೆರಿಗೆ ಸಲಹೆಗಾರ ಆನಂದ ಗೌಡ, ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ, ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ, ವಾಣಿ ಆಂಗ್ಲ ಮಾಧ್ಯಮ ಶಾಲೆಯ ಹೆಡ್ ಮಾಸ್ಟರ್ ಲಕ್ಷ್ಮೀನಾರಾಯಣ ಕೇರ್ಪಳ ಮತ್ತು ಸುಹಾಸಿನಿ ಎ., ಶಿಕ್ಷಕ ಮತ್ತು ರಕ್ಷಕ ಸಂಘದ ಅಧ್ಯಕ್ಷ ಮೋಹನ್ ಗೌಡ ಶಾಲಾ ವಿದ್ಯಾರ್ಥಿ ಸಂಘದ ನಾಯಕಿ ಮಾನ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶೈಕ್ಷಣಿಕ ವರ್ಷದಲ್ಲಿ ಅತೀ ಹೆಚ್ಚು ಅಂಕ ಪಡೆದ ನವಮಿ ಎಮ್. ಭಟ್ ಹಾಗೂ ಅಭಿಜ್ಞಾ ವಿದ್ಯಾರ್ಥಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. 2023-24 ರಲ್ಲಿ ಉನ್ನತ ಶ್ರೇಣಿಯಲ್ಲಿ ಪಡೆದ ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಾರ್ಥನೆಯನ್ನು ಮಾಡಿದರು. ಕಾಲೇಜಿನ ಮುಖ್ಯೋಪ್ರಧ್ಯಾಯ ಲಕ್ಷ್ಮೀ ನಾರಾಯಣ ಸ್ವಾಗತಿಸಿದರು. ಶಿಕ್ಷಕರಾದ ಮೋಹನಾಂಗಿ ಮತ್ತು ರಕ್ಷಿತಾ ಕಾರ್ಯಕ್ರಮ ನಿರೂಪಿಸಿದರು.

Exit mobile version