Site icon Suddi Belthangady

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು – ವಾರ್ಷಿಕೋತ್ಸವದ ಪ್ರಯುಕ್ತ ಕ್ರೀಡಾ ಕೂಟ

ಕೊಯ್ಯೂರು: ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ ಹಳೆ ವಿದ್ಯಾರ್ಥಿಗಳಿಗೆ ಮತ್ತು ಪೋಷಕರಿಗೆ ನಡೆದ ಕ್ರೀಡಾ ಕೂಟವನ್ನು ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಡೀಕಯ್ಯ ಪೂಜಾರಿ ಇವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪುರಂದರ ಗೌಡ, ನಿಕಟ ಪೂರ್ವ ಅಧ್ಯಕ್ಷ ಸುಧಾಕರ ದೇವಾಡಿಗ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಂದ್ರಶೇಖರ ಮಾವಿನಕಟ್ಟೆ, ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನವೀನ್ ಗೌಡ ವಾದ್ಯಕೋಡಿ, ನಿರ್ದೇಶಕ ಯತೀಶ್ ಗೌಡ ದಡ್ಡು, ಶ್ರೀ ಶಾರದಾ ಪೂಜಾ ಸಮಿತಿಯ ಅಧ್ಯಕ್ಷ ಸದಾನಂದ ಗೌಡ ಅಡೆಂಕಿಲೊಟ್ಟು ಮತ್ತು ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು, ಶಾಲಾ ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Exit mobile version