p>
ಸಾರ್ವಜನಿಕ ಜೀವನದಲ್ಲಿ ಶಿಸ್ತಿನ ಸಿಪಾಯಿಯಾಗಿ, ಆಡಳಿತ ಹಾಗೂ ಅಭಿವೃದ್ಧಿಯಲ್ಲಿ ದೂರದರ್ಶಿತ್ವ ಹೊಂದಿದ್ದ ಅಪರೂಪದ ರಾಜಕಾರಣಿಯಾಗಿದ್ದರು. ಬೆಂಗಳೂರು ನಗರವನ್ನು ಆಧುನಿಕತೆಗೆ ಹೊಸ ಸ್ಪರ್ಶ ನೀಡುವಲ್ಲಿ ಅವರ ಕೊಡುಗೆ ಅಪಾರ.
ಐಟಿ-ಬಿಟಿ, ನೀರಾವರಿ, ಮಹಿಳಾ ಸಬಲೀಕರಣ, ಸ್ತ್ರೀ ಶಕ್ತಿ ಸ್ವಸಹಾಯ ಸಂಘ, ನಗರಾಭಿವೃದಿ ಮುಂತಾದ ಕ್ಷೇತ್ರದಲ್ಲಿ ಅವರು ನೀಡಿದ ಕಾರ್ಯಕ್ರಮಗಳು ಇಂದಿಗೂ ಜನಮಾನಸದಲ್ಲಿ ಉಳಿಯಲಿದೆ.
ಅವರ ಅಗಲಿಕೆಯಿಂದ ದುಃಖದಲ್ಲಿರುವ ಅವರ ಕುಟುಂಬಕ್ಕೆ ಹಾಗೂ ಅಪಾರ ಅಭಿಮಾನಿಗಳ ನೋವಿನಲ್ಲಿ ನಾನೂ ಕೂಡ ಭಾಗಯಾಗಿದ್ದೇನೆ. ಅವರ ಆತ್ಮಕ್ಕೆ ಆ ಭಗವಂತ ಶಾಂತಿ ಕರುಣಿಸಲಿ ಎಂದು ಪ್ರಧಾನ ಕಾರ್ಯದರ್ಶಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಸಂತಾಪ ಸೂಚಿಸಿದ್ದಾರೆ.