p>
ಬೆಳ್ತಂಗಡಿ: ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಹಾಗೂ ರಸ್ತೆ ಮತ್ತು ಇತರೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವಂತೆ ಮಾನ್ಯ ವಸತಿ, ವಕ್ಷ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವರಾದ ಬಿ. ಜೆಡ್. ಜಮೀರ್ ಅಹಮ್ಮದ್ ಖಾನ್ ಅವರನ್ನು ಬೆಳಗಾವಿಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವಾರಾಂ ಭೇಟಿ ಮಾಡಿ ಮನವಿ ಮಾಡಿದರು, ಮನವಿಗೆ ಸಚಿವರೂ ಪೂರಕವಾಗಿ ಸ್ಪಂದನೆ ಮಾಡಿದ್ದು ಶೀಘ್ರದಲ್ಲಿ ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ’ ಅಧ್ಯಕ್ಷ ಶಾಹುಲ್ ಹಮೀದ್ ಕೆ. ಕೆ. ಉಪಸ್ಥಿತರಿದ್ದರು.
p>