ನಾರಾವಿ: ಸಂತ ಅಂತೋನಿ ‘ಶಿಕ್ಷಣ ಸಂಸ್ಥೆಗಳ ದಿನಾಚರಣೆ’ಯು ದಿನಾಂಕ ಡಿ. 6 ರಂದು ನಡೆಯಿತು. ಬೆಳಿಗ್ಗೆ ಧ್ವಜಾರೋಹಣವನ್ನು ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆಯನ್ನು ನೀಡಲಾಯಿತು.
ಮಧ್ಯಾಹ್ನ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಜೆ. ಆರ್ ಲೋಬೋ, ನಾರಾವಿ ಎಂಬ ಗ್ರಾಮೀಣ ಪರಿಸರದಲ್ಲಿ ಶಿಕ್ಷಣದ ಕೊರತೆಯನ್ನು ನೀಗಿಸಿದ ಸಂತ ಅಂತೋನಿ ಶಿಕ್ಷಣ ಸಂಸ್ಥೆಯನ್ನು ಕೊಂಡಾಡಿದರು. ಕರ್ನಾಟಕ ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕ ಫಿಲೋಮಿನಾ ಲೋಬೊ ವೇದಿಕೆಯಲ್ಲಿದ್ದರು.
ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ವಂ. ಸ್ವಾಮಿ ಜೆರೋಮ್ ಡಿ’ಸೋಜಾ ಅಧ್ಯಕ್ಷತೆಯನ್ನು ವಹಿಸಿದ್ದರು. ಸಂತ ಅಂತೋನಿ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಸಂಜಯ್ ಮಿರಾಂದ, ಕಾರ್ಯದರ್ಶಿ ಎವ್ಜಿನ್ ರೋಡ್ರಿಗಸ್, ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳ ಎಲ್ಲಾ ಮುಖ್ಯಸ್ಥರು ಸಂತ ಅಂತೋನಿ ಪದವಿ ಪೂರ್ವ ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿ ಸಂಘದ ನಾಯಕರು ಉಪಸ್ಥಿತರಿದ್ದರು.
ಪ್ರಾoಶುಪಾಲ ವಂದನೀಯ ಡಾ. ಆಲ್ವಿನ್ ಸೆರಾವೋ ಎಲ್ಲರನ್ನು ಸ್ವಾಗತಿಸಿದರು. ಸಂತ ಅಂತೋನಿ ಪದವಿ ಪೂರ್ವ ಕಾಲೇಜಿನ ಅರ್ಥಶಾಸ್ತ್ರ ಉಪನ್ಯಾಸಕಿ ಜ್ಯೋತಿ ಹೆಗ್ಡೆ ಕಾರ್ಯಕ್ರಮವನ್ನು ನಿರೂಪಿಸಿದರೆ ಪದವಿ ಕಾಲೇಜಿನ ಉಪಪ್ರಾoಶುಪಾಲ ಸಂತೋಷ್ ಸಲ್ದಾನ ಎಲ್ಲರಿಗೂ ಧನ್ಯವಾದವಿತ್ತರು.