ಧರ್ಮಸ್ಥಳ ಸಹಕಾರ ಸಂಘದ ಸದಸ್ಯರು, ಆಡಳಿತ ಮಂಡಳಿ ನಿರ್ದೇಶಕರು, ಸಿಬ್ಬಂದಿಗಳ ಸಹಕಾರದಲ್ಲಿ ಪುದುವೆಟ್ಟು ಬಡ ಕುಟುಂಬಕ್ಕೆ ಮನೆ ನಿರ್ಮಾಣಕ್ಕೆ ಶಿಲಾನ್ಯಾಸ

0

ಪುದುವೆಟ್ಟು : ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರು ಸಹಾಯಾರ್ಥವಾಗಿ ಪುದುವೆಟ್ಟು ಗ್ರಾಮದಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣದ ಯೋಜನೆಯ ಮನೆಯ ಶಿಲಾನ್ಯಾಸ ಕಾರ್ಯಕ್ರಮ ಡಿ.12 ರಂದು ನಡೆಯಿತು.

ಈ ಸಂದರ್ಭದಲ್ಲಿ ಧರ್ಮಸ್ಥಳದ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಕುಶಾಲಪ್ಪ ಗೌಡ ಪೂವಾಜೆ, ಉದ್ಯಮಿ ರಮೇಶ್ ಪ್ರಭು, ನಿತ್ಯಾನಂದ ಎಟ್ಟಿಯೋಟ್ಟು, ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಪುದುವೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪೂರ್ಣಾಕ್ಷ, ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ., ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಶಿಧರ್, ನಿರ್ದೇಶಕರು, ಸಿಬ್ಬಂದಿಗಳು, ಪುದುವೆಟ್ಟು ಮತ್ತು ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here