ಉರುವಾಲು: ಬೈತಾರು ಕಾರಿಂದ ಶ್ರೀ ವಿಶ್ವೇಶ್ವರ ಭಜನಾ ಮಂದಿರದ 17ನೇ ವರ್ಷದ ನಗರ ಭಜನೆಯ ಮಂಗಳೋತ್ಸವ ಕಾರ್ಯಕ್ರಮ ಶ್ರೀ ವಿಶ್ವೇಶ್ವರ ಭಜನಾ ಮಂದಿರದಲ್ಲಿ ನಡೆಯಿತು.
ಬೆಳಿಗ್ಗೆ ಗಣಹೋಮ, ಮಧ್ಯಾಹ್ನ ಸತ್ಯನಾರಾಯಣ ಪೂಜೆ, ಸಂಜೆ ಆಹ್ವಾನಿತ ಭಜನಾ ಮಂಡಳಿಗಳ ಭಜನಾ ಕಾರ್ಯಕ್ರಮ ಮತ್ತು ರಂಗಪೂಜೆ ನಡೆಯಿತು. ನಂತರ ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು.