ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮ

0

p>

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.12 ರಂದು 2024-25 ನೇ ಶೈಕ್ಷಣಿಕ ವರ್ಷದ ಬಹುಮಾನ ವಿತರಣಾ ಕಾರ್ಯಕ್ರಮವು ಸೇಕ್ರೆಡ್ ಹಾರ್ಟ್ ಕೆಳ ಅಂತಸ್ತಿನ ಸಭಾಭವನದಲ್ಲಿ ನಡೆಯಿತು.

ಈ ಕಾರ್ಯಕ್ರಮವನ್ನು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಂತ್ಯಾರು ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಜೆರಾಲ್ಡ್ ಮೊರಾಸ್ ವಹಿಸಿದ್ದರು. ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ನಾವು ಜೀವನದಲ್ಲಿ ಗೆಲ್ಲುವುದು ಸೋಲುವುದು ಸಹಜ, ಗೆದ್ದವರು ಪ್ರಶಸ್ತಿಯನ್ನು ಪಡೆಯುತ್ತಾರೆ, ಸೋತವರು ಜೀವನದಲ್ಲಿ ಒಂದು ಪಾಠವನ್ನು ಕಲಿಯುತ್ತಾರೆ ಎಂದು ಹೇಳಿ ಮಕ್ಕಳಿಗೆ ಶುಭ ಕೋರಿದರು.

ಮುಖ್ಯ ಅತಿಥಿಗಳಾಗಿ ದಯ ವಿಶೇಷ ಶಾಲೆ ಉಜಿರೆಯ ನಿರ್ದೇಶಕ ವಂ. ಸ್ವಾ. ವಿನೋದ್ ಮಸ್ಕರೇನಸ್ ಆಗಮಿಸಿದ್ದರು. ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ, ನಾವು ಜೀವನದಲ್ಲಿ ಕನಸು ಕಾಣಬೇಕು ಅದನ್ನು ನನಸುಗೊಳಿಸಲು ಪ್ರಯತ್ನಿಸಬೇಕು ಎಂದು ಹೇಳಿ ಮಕ್ಕಳಿಗೆ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯ ವಂ. ಸ್ವಾ. ದೀಪಕ್ ಲಿಯೋ ಡೇಸ, ಆಶಾ ದೀಪ ಸೆಮಿನಾರಿಯ ಬ್ರದರ್ ಅಲ್ಡ್ರಿಕ್ ಕ್ಸೇವಿಯರ್, ಸೇಕ್ರೆಡ್ ಹಾರ್ಟ್ ಕಾನ್ವೆಂಟ್ ನ ನಿರ್ದೇಶಕಿ ಸಿಸ್ಟರ್ ಅಮಿತಾ, ಶಿಕ್ಷಕ-ರಕ್ಷಕ ಸಂಘದ ಉಪಾಧ್ಯಕ್ಷ ವಿನಯ್ ಡಿಸೋಜರವರು, ಶಿಕ್ಷಕ – ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಲಾಸ್ಯ ಮತ್ತು ಮಾನ್ವಿತಾ ನಾಯಕ್ ನಿರೂಪಿಸಿ, ಇಚ್ಚ ಶೆಟ್ಟಿ ಸ್ವಾಗತಿಸಿ, ಮನಸ್ವಿರವರು ಧನ್ಯವಾದವನ್ನು ಸಮರ್ಪಿಸಿದರು.

LEAVE A REPLY

Please enter your comment!
Please enter your name here