Site icon Suddi Belthangady

ಉಜಿರೆ: ಭಗವದ್ಗೀತಾ ಸ್ಪರ್ಧೆಯಲ್ಲಿ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟದಲ್ಲಿ ತೃತೀಯ

ಉಜಿರೆ: ಶಿರಸಿಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನವು ವಿಜಯಪುರದ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯಲ್ಲಿ ‘ಭಗವದ್ಗೀತೆಯಲ್ಲಿ ಭ್ರಾತೃತ್ವ’ ಎನ್ನುವ ವಿಷಯದಲ್ಲಿ ನಡೆಸಿದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿಯ ವಾಣಿಜ್ಯ ಶಾಸ್ತ್ರ ವಿಭಾಗದ ಸಂಸ್ಕೃತ ಭಾಷಾ ವಿದ್ಯಾರ್ಥಿನಿ ಹಂಸಿನಿ ಭಿಡೆ ತೃತೀಯ ಬಹುಮಾನ ಪಡೆದಿದ್ದಾರೆ.

ದ.ಕ ಜಿಲ್ಲಾ ಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದಿದ ಈಕೆ ಉಜಿರೆಯ ಸುದ್ದಿ ಬಿಡುಗಡೆ ಪತ್ರಿಕೆಯ ವಿತರಕ ಕಲ್ಮಂಜ ಧನಂಜಯ ಭಿಡೆ ಹಾಗೂ ಚಿತ್ರಾ ಭಿಡೆ ದಂಪತಿಯ ಪುತ್ರಿ.

Exit mobile version